Download Our App

Follow us

Home » ಸಿನಿಮಾ » ದೀಪಿಕಾ ಪಡುಕೋಣೆಗೆ ಗಂಡು ಮಗು ಜನನ – ತಾಯಿ ಮಗುವಿನ ಫೋಟೋ ವೈರಲ್..!

ದೀಪಿಕಾ ಪಡುಕೋಣೆಗೆ ಗಂಡು ಮಗು ಜನನ – ತಾಯಿ ಮಗುವಿನ ಫೋಟೋ ವೈರಲ್..!

ಪರಸ್ಪರ ಪ್ರೀತಿಸಿ ಮದುವೆ ಆದ ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​ ಅವರ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಗಲಿದೆ. ದೀಪಿಕಾ ಪಡುಕೋಣೆ ಸೆಪ್ಟೆಂಬರ್‌ನಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ. ಈ ಬಗ್ಗೆ ಖುದ್ದು ದೀಪಿಕಾ-ರಣವೀರ್‌ ದಂಪತಿ ಪೋಸ್ಟ್‌ ಮೂಲಕ ತಿಳಿಸಿದ್ದರು. ಆದರೆ ಇದೀಗ ದೀಪಿಕಾ ಪಡುಕೋಣೆ ಮಗುವಿನೊಂದಿಗೆ ಆಸ್ಪತ್ರೆಯಲ್ಲಿರುವ ಫೋಟೋ ವೈರಲ್‌ ಆಗಿದೆ. ಈ ವೈರಲ್ ಫೋಟೋ ನೋಡಿ ಜನರು ಶಾಕ್ ಆಗಿದ್ದಾರೆ.

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರಿಗೆ ಗಂಡು ಮಗು ಜನಿಸಿದೆ ಎಂದು ಹೇಳಲಾಗುತ್ತಿದೆ. ದೀಪಿಕಾ ಮತ್ತು ರಣವೀರ್ ಮಗುವಿನ ಜೊತೆಗಿರುವ ಈ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ವೈರಲ್‌ ಆದ ಈ ಫೋಟೋದಲ್ಲಿ ದೀಪಿಕಾ ಪಡುಕೋಣೆ ಹಾಸಿಗೆ ಮೇಲೆ ಮಲಗಿದ್ದು ಅವರ ಪಕ್ಕದಲ್ಲಿ ರಣವೀರ್‌ ಮಗು ಹಿಡಿದು ನಿಂತಿದ್ದಾರೆ. ಆದರೆ ಇದು ನಕಲಿ ಫೋಟೋ ಆಗಿದ್ದು, ಅದನ್ನು ಚೆನ್ನಾಗಿ ಎಡಿಟ್ ಮಾಡಲಾಗಿದೆ. ಸರಿಯಾಗಿ ಗಮನಿಸಿದರೆ ಇದು ನಕಲಿ ಫೋಟೋ ಎಂಬುದು ಗೊತ್ತಾಗುತ್ತದೆ. ಹಾಗಾಗಿ ದೀಪಿಕಾ ಪಡುಕೋಣೆ ಅವರ ಅಭಿಮಾನಿಗಳಿಗೆ ಈ ಬಗ್ಗೆ ಸ್ಪಷ್ಟನೆ ಸಿಕ್ಕಿದೆ.  ದೀಪಿಕಾ ಪಡುಕೋಣೆ ಮಗುವಿಗೆ ಜನ್ಮ ನೀಡಿಲ್ಲ. ದೀಪಿಕಾ ಸೆಪ್ಟೆಂಬರ್ 2024 ರಲ್ಲಿ ತಮ್ಮ ಪುಟ್ಟ ಮಗುವನ್ನು ಸ್ವಾಗತಿಸಲಿದ್ದಾರೆ.

ಇದನ್ನೂ ಓದಿ : ಕೋಲಾರದಲ್ಲಿ ಬೈಕ್​​ಗೆ KSRTC ಬಸ್ ಡಿಕ್ಕಿ – ಕಾಲೇಜು ವಿದ್ಯಾರ್ಥಿ ಸಾವು..!

Leave a Comment

DG Ad

RELATED LATEST NEWS

Top Headlines

ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಪ್ರಶ್ನೆ ಇಲ್ಲವೇ ಇಲ್ಲ – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!

ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿರುವ ರಾಜ್ಯ ಸರ್ಕಾರದ ಶಕ್ತಿ ಯೋಜನೆ ಸ್ಥಗಿತವಾಗುತ್ತದೆಯೇ ಎಂಬ ಸುದ್ದಿಗಳು ಹರಿದಾಡುತ್ತಿವೆ, ಇದರ ಬೆನ್ನಲ್ಲಿಯೇ ಸಿಎಂ ಸಿದ್ದರಾಮಯ್ಯ

Live Cricket

Add Your Heading Text Here