ಬಾಲಿವುಡ್ನ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಮನೆಯಲ್ಲಿ ಸಂಭ್ರಮ ಮನೆಮಾಡಿದೆ. ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ದಂಪತಿ ಚೊಚ್ಚಲ ಕಂದಮ್ಮನನ್ನು ಬರಮಾಡಿಕೊಂಡಿದ್ದಾರೆ. ಸೆಪ್ಟೆಂಬರ್ 08ರಂದು ದೀಪಿಕಾ ಪಡುಕೋಣೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಹೌದು, ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಮುದ್ದಾದ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ನಿನ್ನೆ ಏಕಾಏಕಿ ದೀಪಿಕಾ ಪಡುಕೋಣೆ ಮುಂಬೈನ ಪ್ರತಿಷ್ಠಿತ ಹೆಚ್ಎನ್ ರಿಲಯನ್ಸ್ ಆಸ್ಪತ್ರೆಗೆ ಆಗಮಿಸಿದ್ದರು. ಇದನ್ನು ಗಮನಿಸಿರುವ ಅಭಿಮಾನಿಗಳು ರಣವೀರ್ ಹಾಗೂ ದೀಪಿಕಾಗೆ ಮಗು ಹೆಣ್ಣು ಮಗುವಾಗುತ್ತದೆ ಅಂತ ಗೆಸ್ ಮಾಡಿದ್ದರು. ಇನ್ನೂ ಕೆಲವರು ಗಂಡು ಮಗುವಾಗುತ್ತದೆ ಅಂತ ಹೇಳುವ ಮೂಲಕ ಖುಷಿಯನ್ನು ವ್ಯಕ್ತಪಡಿಸಿದ್ದರು.
ಇದೀಗ ಬಾಲಿವುಡ್ ಸ್ಟಾರ್ ಜೋಡಿಗೆ ಹೆಣ್ಣು ಮಗುವಿನ ಜನನವಾಗಿದೆ. ಇದೇ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಇತ್ತೀಚೆಗಷ್ಟೇ ಮುಂಬೈನ ಸಿದ್ಧಿ ವಿನಾಯಕನ ಮಂದಿರಕ್ಕೆ ಈ ಜೋಡಿ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿತ್ತು. ತಮ್ಮ ಬಾಳಿನ ಹೊಸ ಅಧ್ಯಾಯ ಶುರುವಾಗುವುದಕ್ಕೂ ಮುನ್ನವೇ ಸಿದ್ಧಿ ವಿನಾಯಕನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಎಲ್ಲವೂ ನಿರ್ವಿಘ್ನವಾಗಿ ಸಾಗಲಿ ಎಂದು ಬೇಡಿಕೊಂಡಿದ್ದರು. ಇದಾದ ಬಳಿಕವೇ ದೀಪಿಕಾ ಪಡುಕೋಣೆಗೆ ಹೆಣ್ಣು ಮಗು ಜನನವಾಗಿದೆ.
ಇದನ್ನೂ ಓದಿ : ನಟ ಧನ್ವೀರ್ ಬರ್ತ್ಡೇಗೆ ಪೋಸ್ಟರ್ ರಿಲೀಸ್ ಮೂಲಕ ವಿಶ್ ಮಾಡಿದ ‘ಹಯಗ್ರೀವ’ ಚಿತ್ರತಂಡ..!