Download Our App

Follow us

Home » ರಾಜಕೀಯ » ಚಿಕ್ಕಬಳ್ಳಾಪುರದಲ್ಲಿ ಡಾ.ಕೆ ಸುಧಾಕರ್ ಗೆಲುವು : ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯ..!

ಚಿಕ್ಕಬಳ್ಳಾಪುರದಲ್ಲಿ ಡಾ.ಕೆ ಸುಧಾಕರ್ ಗೆಲುವು : ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯ..!

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ವಿರುದ್ಧ ಸ್ಪರ್ಧಿಸಿರುವ ಡಾ.ಕೆ ಸುಧಾಕರ್ ಅವರು 1,63,460 ಮತಗಳ ಅಂತರದಲ್ಲಿ ಜಯ ದಾಖಲಿಸಿದ್ದಾರೆ. ಈ ಹಿನ್ನಲೆ ಇದೀಗ ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆಗೆ ಒತ್ತಾಯ ಕೇಳಿ ಬರುತ್ತಿದೆ.

ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ 1 ವೋಟ್ ಕೂಡಾ ಲೀಡ್ ಕೊಡಲ್ಲ, 1 ವೋಟ್ ಲೀಡ್ ಕೊಟ್ರೂ ರಾಜೀನಾಮೆ ಕೊಡ್ತೇನೆ ಎಂದು ಪ್ರದೀಪ್‌ ಈಶ್ವರ್‌ ಹೇಳಿದ್ದರು. ಹಾಗಾಗಿ ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.

ಈಗ ಖುದ್ದು ಪ್ರದೀಪ್ ಈಶ್ವರ್ ಕ್ಷೇತ್ರದಲ್ಲೇ ಸುಧಾಕರ್​ ಮುನ್ನಡೆ ಸಾಧಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಧಾಕರ್ 19 ಸಾವಿರ ಲೀಡ್ ಪಡೆದಿದ್ದು, ಸವಾಲ್​ ಹಾಕಿ ಸೋತ ಪ್ರದೀಪ್​ ಈಶ್ವರ್​ ಇಂದೇ ರಾಜೀನಾಮೆ ನೀಡುವಂತೆ ಒತ್ತಾಯ ಕೇಳಿ ಬರುತ್ತಿದೆ.

ಇದನ್ನೂ ಓದಿ : ಸುರಪುರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ್​​ಗೆ ಭರ್ಜರಿ ಗೆಲುವು..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here