ಕಲಬುರಗಿ : ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ ಕಲಬುರ್ಗಿ ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ ನಡೆದಿದೆ.
ಜಿಲ್ಲೆಯ ಸೇಡಂ ತಾಲೂಕಿನ ದೇವನೂರು ನಿವಾಸಿ ಅರ್ಜುನ್ ಮಡಿವಾಳ ಸೇರಿದಂತೆ ಮೂವರ ಮೇಲೆ ಇಮ್ರಾನ್ ಪಟೇಲ್, ಮಹಮ್ಮದ್ ಮತೀನ್ ಸೇರಿ ಹಲವು ದುಷ್ಕರ್ಮಿಗಳು ಹಲ್ಲೆ ಮಾಡಿ ಹಣ ಹಾಕಿಸಿಕೊಂಡು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.
ಕಲಬುರಗಿ ನಗರದ ಹಾಗರಹಾ ಕ್ರಾಸ್ ಬಳಿಯ ಮನೆಯ ಬಳಿ ರಮೇಶ್ ಎಂಬಾತನಿಗೆ ಸೆಕೆಂಡ್ ಹ್ಯಾಂಡ್ ಕಾರು ತೋರಿಸಲು ಬಂದಾಗ ಈ ಮೂವರನ್ನು ಕೂಡಿಹಾಕಿದ ಇಮ್ರಾನ್ ಪಟೇಲ್, ಮಹಮ್ಮದ್ ಮತೀನ್ ಗ್ಯಾಂಗ್ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿ ಬಳಿಕ ಹಣಕ್ಕಾಗಿ ಬೇಡಿಕೆ ಇಟ್ಟು ಹಣಪಡೆದಿದ್ದಾರೆ. ಬಳಿಕ ಮತ್ತಷ್ಟು ಹಣ ನೀಡುವಂತೆ ಒತ್ತಡಹಾಕಿ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟು, ಉಲ್ಟಾ ಮಲಗಿಸಿ ದೊಣ್ಣೆಯಿಂದ ಹೊಡೆದು, ಕುತ್ತಿಗೆ ಮೇಲೆ ಕಾಲಿಟ್ಟು ಟಾರ್ಚರ್ ನೀಡಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಕಲಬುರ್ಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ : ಟೀಸರ್ನಲ್ಲಿಯೇ ಕುತೂಹಲ ಕೆರಳಿಸಿದ ರೂಪೇಶ್ ಶೆಟ್ಟಿ ನಟನೆಯ ‘ಅಧಿಪತ್ರ’ ಸಿನಿಮಾ..!