ಬೆಂಗಳೂರು : ರಾಜ್ಯದಲ್ಲಿ ಡೆಂಘೀ ಸೋಂಕಿನ ಅಬ್ಬರ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 230 ಮಂದಿಯಲ್ಲಿ ಡೆಂಘೀ ಸೋಂಕು ಪತ್ತೆಯಾಗಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 19,543ಕ್ಕೆ ಏರಿಕೆಯಾಗಿದೆ.
ಡೆಂಘೀ ಪ್ರಕರಣಗಳು ದಿನದಿಂದ ದಿನಕ್ಕೆ ರಾಜ್ಯದಲ್ಲಿ ಹೆಚ್ಚುತ್ತಲೇ ಇದ್ದು, ಸದ್ಯ 2316 ಡೆಂಘೀ ಪ್ರಕರಣಗಳು ಸಕ್ರಿಯವಾಗಿವೆ. ಕಳೆದ 24 ಗಂಟೆಯಲ್ಲಿ ಒಂದು ವರ್ಷದೊಳಗಿನ 6 ಮಕ್ಕಳಲ್ಲಿ ಡೆಂಘೀ ಕಾಣಿಸಿಕೊಂಡಿದ್ದು, ಇಲ್ಲಿಯವರೆಗೂ ಒಟ್ಟು ಒಂದು ವರ್ಷದೊಳಗಿನ 366 ಮಕ್ಕಳಲ್ಲಿ ಡೆಂಘೀ ದೃಡವಾಗಿದೆ. ಅದರಂತೆ ಒಂದು ವರ್ಷದಿಂದ 18 ವರ್ಷದೊಳಗಿನ 94 ಮಂದಿಯಲ್ಲಿ ಡೆಂಘೀ ಪತ್ತೆಯಾಗಿದೆ.
ಒಟ್ಟು ಇಲ್ಲಿಯವರೆಗೂ ಒಂದು ವರ್ಷದಿಂದ 18 ವರ್ಷದೊಳಗಿನ 6957 ಮಂದಿಯಲ್ಲಿ ಡೆಂಘೀ ದೃಡವಾಗಿದೆ. ಕಳೆದ 24 ಗಂಟೆಯಲ್ಲಿ 18 ವರ್ಷ ಮೇಲ್ಪಟ್ಟ 130 ಜನರಲ್ಲಿ ಡೆಂಘೀ ಪತ್ತೆಯಾಗಿದ್ದು, ಇಲ್ಲಿಯವರೆಗೂ 18 ವರ್ಷ ಮೇಲ್ಪಟ್ಟ 12220 ಮಂದಿಗೆ ಡೆಂಘೀ ದೃಡವಾಗಿದೆ.
ಇದನ್ನೂ ಓದಿ : ಪತಿ ದರ್ಶನ್ ಬಿಡುಗಡೆಗಾಗಿ ವಿಜಯಲಕ್ಷ್ಮಿ ಟೆಂಪಲ್ ರನ್..!
Post Views: 16