Download Our App

Follow us

Home » ಅಪರಾಧ » ರೇವ್​ ಪಾರ್ಟಿ ಕೇಸ್​​ನಲ್ಲಿ ಕರ್ತವ್ಯ ಲೋಪ – ಹೆಬ್ಬಗೋಡಿ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ಸಸ್ಪೆಂಡ್..!

ರೇವ್​ ಪಾರ್ಟಿ ಕೇಸ್​​ನಲ್ಲಿ ಕರ್ತವ್ಯ ಲೋಪ – ಹೆಬ್ಬಗೋಡಿ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ಸಸ್ಪೆಂಡ್..!

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಣೆಯಲ್ಲಿ ವಿಫಲವಾದ ಆರೋಪದಲ್ಲಿ ಹೆಬ್ಬಗೋಡಿ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಒಬ್ಬರು ASI, ಇಬ್ಬರು ಕಾನ್ಸ್​ಟೇಬಲ್​ಗಳನ್ನು ಅಮಾನತುಗೊಳಿಸಿ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಆದೇಶ  ಹೊರಡಿಸಿದ್ದಾರೆ.

ನಗರದ ಹೊರವಲಯದ ಫಾರ್ಮ್​​ಹೌಸ್​ನಲ್ಲಿ 100ಕ್ಕೂ ಹೆಚ್ಚು ಮಂದಿ ಸೇರಿ ರೇವ್​​ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ದಾಳಿ ನಡೆಸಿದಾಗ ಆಂಧ್ರ ಪ್ರದೇಶ ಮತ್ತು ಬೆಂಗಳೂರು ಮೂಲದ ಸುಮಾರು 100 ಕ್ಕೂ ಹೆಚ್ಚು ಜನ ಇದರಲ್ಲಿ ಭಾಗಿಯಾಗಿದ್ದು ಗೊತ್ತಾಗಿದೆ. ಇದರೊಂದಿಗೆ ಪಾರ್ಟಿಯಲ್ಲಿ 45 ಗ್ರಾಂ ಡ್ರಗ್ಸ್, ಎಂಡಿಎಂಎ, ಕೋಕೆನ್ ಸೇರಿ ಹಲವು ಮಾದರಿಯ ಮಾದಕ ವಸ್ತುಗಳು ಪತ್ತೆಯಾಗಿತ್ತು.

ಆದರೆ ನಗರದಲ್ಲಿ ದೊಡ್ಡ ಮಟ್ಟದಲ್ಲಿ ರೇವ್​​ ಪಾರ್ಟಿ ನಡೆದ್ರೂ ಸಿಸಿಬಿ ರೇಡ್ ಮಾಡುವವರೆಗೂ ಸ್ಥಳೀಯ ಪೊಲೀಸರಿಗೆ ಮಾಹಿತಿ ಇರಲಿಲ್ಲ. ಇದೀಗ ರೇವ್ ಪಾರ್ಟಿ ಮಾಹಿತಿ ಕಲೆ ಹಾಕಲು ವಿಫಲ ಹಿನ್ನೆಲೆಯಲ್ಲಿ ಮೂವರು ಸಿಬ್ಬಂದಿಗಳನ್ನು  ಸಸ್ಪೆಂಡ್ ಮಾಡಲಾಗಿದೆ.

ಇದನ್ನೂ ಓದಿ : ರೇವ್​​ ಪಾರ್ಟಿ ಪ್ರಕರಣ​​ – ಸಿಸಿಬಿ ಪೊಲೀಸರ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು..!

Leave a Comment

DG Ad

RELATED LATEST NEWS

Top Headlines

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿದ ಹೈಕೋರ್ಟ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿಕೆ ಮಾಡಿದೆ. ನಟ ದರ್ಶನ್

Live Cricket

Add Your Heading Text Here