Download Our App

Follow us

Home » ಸಿನಿಮಾ » ದೇಗುಲದ ಪವಿತ್ರ ಪಂಚಾಮೃತದ ಕುರಿತು ಹೇಳಿಕೆ – ಡೈರೆಕ್ಟರ್ ಮೋಹನ್​ ಅರೆಸ್ಟ್..!

ದೇಗುಲದ ಪವಿತ್ರ ಪಂಚಾಮೃತದ ಕುರಿತು ಹೇಳಿಕೆ – ಡೈರೆಕ್ಟರ್ ಮೋಹನ್​ ಅರೆಸ್ಟ್..!

ತಿರುಪತಿಯ ತಿಮ್ಮಪ್ಪನ ಪವಿತ್ರ ಪ್ರಸಾದವಾದ ಲಡ್ಡುವಿನಲ್ಲಿ ದನದ ಕೊಬ್ಬು ಬಳಕೆ ವಿಚಾರ ದೇಶದಲ್ಲಿಯೇ ಕೋಲಾಹಲ ಎಬ್ಬಿಸಿದೆ. ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ವಿತರಣೆಯಾಗುತ್ತಿರುವ ಪ್ರಸಾದದ ಸ್ವಚ್ಛತೆ ಬಗ್ಗೆ ಸ್ಥಳೀಯ ಸರ್ಕಾರ ಹಾಗೂ ದೇವಾಲಯದ ಆಡಳಿತ ಮಂಡಳಿಗಳು ಜಾಗೃತೆಯಾಗಿವೆ.

ಇದೀಗ ಪಳನಿ ದೇವಸ್ಥಾನದ ಪವಿತ್ರ ಪಂಚಾಮೃತಂ ಕುರಿತು ಹೇಳಿಕೆ ನೀಡಿದ್ದ ತಮಿಳು ನಿರ್ದೇಶಕ ಮೋಹನ್​ ಜಿ ಕ್ಷತ್ರಿಯನ್ ಅವರನ್ನು ತಿರುಚಿ ಪೊಲೀಸರು ಬಂಧಿಸಿದ್ದಾರೆ.  ‘ಬಕಾಸುರನ್’, ‘ದ್ರೌಪದಿ’ ಇನ್ನೂ ಕೆಲವು ಸಿನಿಮಾಗಳನ್ನು ನಿರ್ದೇಶಿಸಿ ಚರ್ಚೆಯಲ್ಲಿರುವ ನಿರ್ದೇಶಕ ಮೋಹನ್ ಜಿ ಕ್ಷತ್ರಿಯನ್ ಬಂಧನದ ಬೆನ್ನಲ್ಲೇ ಪಳನಿ ದೇವಾಲಯದ ಪ್ರಸಾದವನ್ನು ಸಹ ಪರೀಕ್ಷೆಗೆ ಒಳಪಡಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ.

ನಿರ್ದೇಶಕ​ ಮೋಹನ್ ಹೇಳಿದ್ದೇನು? ನಿರ್ದೇಶಕ ಮೋಹನ್ ಅವರು ಪಳನಿ ದೇವಸ್ಥಾನದಲ್ಲಿ ಭಕ್ತರಿಗೆ ನೀಡಲಾಗುವ ಪಂಚಾಮೃತದಲ್ಲಿ ದುರ್ಬಲ ಮಾತ್ರೆ ಬಳಸುತ್ತಾರೆ ಎಂದು ಹೇಳಿಕೆ ನೀಡಿದ್ದರು. ಇದನ್ನು ಗಮನಿಸಿ ಅವರ ಮೇಲೆ ದೂರು ದಾಖಲಾಗಿದೆ. ಈ ಹಿನ್ನೆಲೆ ನಿರ್ದೇಶಕನನ್ನು ಅರೆಸ್ಟ್​ ಮಾಡಲಾಗಿದೆ. ತಿರುಪತಿ ಲಡ್ಡುವಿನಲ್ಲಿ ದನ, ಹಂದಿ ಮತ್ತು ಮೀನಿನ ಎಣ್ಣೆ ಬಳಕೆ ಆರೋಪ ಕೇಳಿ ಬಂದ ಹಿನ್ನೆಲೆ ಡೈರೆಕ್ಟರ್​ ಕೊಟ್ಟ ಈ ಹೇಳಿಕೆಯು ವೈರಲ್​ ಆಗಿದೆ. ಹೇಳಿಕೆ ಆಧರಿಸಿ ತಿರುಚಿ ಪೊಲೀಸರು ಮೋಹನ್ ಅವರನ್ನು ಚೆನ್ನೈನಲ್ಲಿ ಬಂಧಿಸಿ ತಿರುಚಿಗೆ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ : ಧಾರವಾಡ : ಲಾರಿಗೆ ಹಿಂಬದಿಯಿಂದ ಟಿಟಿ ವಾಹನ ಡಿಕ್ಕಿ – ಇಬ್ಬರ ಸ್ಥಿತಿ ಚಿಂತಾಜನಕ..!

Leave a Comment

DG Ad

RELATED LATEST NEWS

Top Headlines

4 ಅಂತಸ್ತಿನ ಕಟ್ಟಡ ಕುಸಿತ – ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗು..!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊದಲ್ಲಿ

Live Cricket

Add Your Heading Text Here