ಬೆಂಗಳೂರು : ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಎಂಎಲ್‌ಸಿ ಡಿ.ಎಸ್. ವೀರಯ್ಯ ಅವರನ್ನು CID ಬಂಧಿಸಿದೆ. 47.10 ಕೋಟಿ ಹಗರಣದ ಆರೋಪದಲ್ಲಿ ಮೈಸೂರಿನಲ್ಲಿ ವೀರಯ್ಯರನ್ನು ಬಂಧಿಸಲಾಗಿದೆ. ಕೆಲ ದಿನಗಳ ಹಿಂದೆ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಅರೆಸ್ಟ್ ಆಗಿತ್ತು. ಇದೀಗ ಮೈಸೂರಿನಲ್ಲಿ ಮುಡಾ ಅಕ್ರಮ ವಿರೋಧಿಸಿ ಶುಕ್ರವಾರ ಪ್ರತಿಭಟನೆಗೆ ತೆರಳಿದ್ದಾಗ ಮಾಜಿ ಎಂಎಲ್‌ಸಿ ವೀರಯ್ಯರನ್ನು ಬಂಧಿಸಲಾಗಿದೆ.
2021ರಿಂದ 2023ರವರೆಗೆ ಡಿ.ಎಸ್.ವೀರಯ್ಯ ಅವರು ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ನಿಗಮದ ಅಧ್ಯಕ್ಷರಾಗಿದ್ದಾಗ ನಡೆದಿದ್ದ ಸುಮಾರು 47.10 ಕೋಟಿ ರೂ. ಅಕ್ರಮದ ಬಗ್ಗೆ ಹಾಲಿ ವ್ಯವಸ್ಥಾಪಕ ನಿರ್ದೇಶಕ ವಿಲ್ಸನ್ ಗಾರ್ಡ್ನ್ ಠಾಣೆಗೆ ದೂರು ನೀಡಿದ್ದರು. ದೂರಿನ ಮೇರೆಗೆ 2023ರ ಸೆಪ್ಟೆಂಬರ್ 23ರಂದು ಎಫ್ಐಆರ್ ದಾಖಲಾಗಿತ್ತು. ಬಳಿಕ ವೀರಯ್ಯ ಅವರಿಗೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದ ಸಿಐಡಿ, 600ಕ್ಕೂ ಹೆಚ್ಚು ದಾಖಲೆಗಳನ್ನು ವಶಕ್ಕೆ ಪಡೆದಿತ್ತು. ಇದೀಗ ಮಾಜಿ ಎಂಎಲ್‌ಸಿ ವೀರಯ್ಯರನ್ನು ಬಂಧಿಸಿದೆ.
ಇದನ್ನೂ ಓದಿ : ವಾಲ್ಮೀಕಿ ಹಗರಣ ಕೇಸ್ - ಮಾಜಿ ಮಂತ್ರಿ ನಾಗೇಂದ್ರ 6 ದಿನ ED ಕಸ್ಟಡಿಗೆ..!