ಸೂಪರ್ ಹಿಟ್ ಚಿತ್ರದ ಮೂಲಕ ಅಭಿಮಾನಿಗಳ ಮನಗೆದ್ದಿರುವ ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ವೈವಾಹಿಕ ಬದುಕಿಗೆ ಕಾಲಿಡಲು ಸಜ್ಜಾಗಿದ್ದಾರೆ. ಡಾಲಿ ಮನಸ್ಸು ಕದ್ದ ಹುಡುಗಿ ಯಾರು ಅನ್ನೋದು ಬಹಿರಂಗವಾಗಿದೆ.
ಬಹುಕಾಲದ ಗೆಳತಿ ಧನ್ಯಾತಾ ಜೊತೆ ಡಾಲಿ ಧನಂಜಯ್ ಮದುವೆಯಾಗುತ್ತಿದ್ದಾರೆ. ವೈದ್ಯೆಯಾಗಿರುವ ಧನ್ಯತಾ ಮೂಲತಃ ಚಿತ್ರದುರ್ಗದವರು. ಕಳೆದ ಕೆಲ ವರ್ಷಗಳಿಂದ ಪ್ರೀತಿಯಲ್ಲಿ ಬಿದ್ದಿದ್ದ ಈ ಜೋಡಿ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
38ರ ಹರೆದ ಡಾಲಿ ಧನಂಜಯ್ ಮದುವೆ ಕುರಿತು ಹಲವು ವೇದಿಕೆಗಲ್ಲಿ ಚರ್ಚೆಯಾಗಿದೆ. ನಟ ನಟಿಯರು, ಕಟುಬಸ್ಥರು ಡಾಲಿ ಬಳಿ ಮದುವೆ ಯಾವಾಗ ಅನ್ನೋ ಪ್ರಶ್ನೇ ಕೇಳುತ್ತಲೇ ಬಂದಿದ್ದಾರೆ. ಈ ವೇಳೆ ಕಂಕಣ ಭಾಗ್ಯ ಕೂಡಿಬರಬೇಕು ಎನ್ನುತ್ತಿದ್ದ ನಟ, ಪ್ರೀತಿ ವಿಚಾರ ಗೌಪ್ಯವಾಗಿಟ್ಟಿದ್ದರು. ಎಲ್ಲೂ ಕೂಡ ಧನ್ಯತಾ ಜೊತೆಗಿನ ಪ್ರೀತಿ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ.
ಇದೀಗ ದೀಪಾವಳಿ ಹಬ್ಬದ ದಿನ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ್ದಾರೆ. ಧನ್ಯತಾ ಜೊತೆ ಫೋಟೋಶೂಟ್ ಮಾಡಿಸಿಕೊಂಡಿರುವ ಡಾಲಿ ಧನಂಜಯ್ ಅಧಿಕೃತವಾಗಿ ತಮ್ಮ ಪ್ರೀತಿ ಹಾಗೂ ಮದುವೆ ಘೋಷಿಸಿದ್ದಾರೆ.
ಅಂದಹಾಗೆ ಇಬ್ಬರ ಮದುವೆ ಫೆಬ್ರವರಿಯಲ್ಲಿ ನಡೆಯಲಿದೆ. ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್ನಲ್ಲಿ ಧನಂಜಯ್ ಮತ್ತು ಧನ್ಯತಾ ಮದುವೆ ನಡೆಯಲಿದೆ. ಅದ್ದೂರಿಯಾಗಿ ನಡೆಯುವ ಮದುವೆ ಸಮಾರಂಭದಲ್ಲಿ ಸಿನಿಮಾರಂಗ, ರಾಜಕೀಯ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರು ಹಾಜರಾಗಲಿದ್ದಾರೆ.
ಬೆಳಗ್ಗೆ ಮಾಂಗಲ್ಯ ಧಾರಣೆ ಅದೇ ದಿನ ಅದೆ ಗ್ರೌಂಡ್ನಲ್ಲಿ ಆರತಕ್ಷತೆ ಸಮಾರಂಭ ನಡೆಯಲಿದೆ. ಮೈಸೂರು ಧನಂಜಯ್ ಮತ್ತು ಧನ್ಯತಾ ಇಬ್ಬರಿಗೂ ಎಮೋಷನಲಿ ಕನೆಕ್ಟ್ ಆದ ಸ್ಥಳ ಹಾಗಾಗಿ ಅಲ್ಲಿಯೇ ಹಸೆಮಣೆ ಏರುವ ನಿರ್ಧಾರ ಮಾಡಿದ್ದಾರೆ. ಸದ್ಯ ಗುಡ್ ನ್ಯೂಸ್ ನೀಡಿರುವ ಧನಂಜಯ್ ಅವರಿಗೆ ಶುಭಾಶಯಗಳ ಸುರಿಮಳೆಯೇ ಬರುತ್ತಿದೆ.
ಇದನ್ನೂ ಓದಿ : ಕೊನೆಗೂ ಡಾಲಿ ಮದುವೆ ಫಿಕ್ಸ್ – ಡಾಕ್ಟರ್ ಜೊತೆ ನಟ ಧನಂಜಯ್ ಕಲ್ಯಾಣ.. ಹುಡುಗಿ ಯಾರು ಗೊತ್ತಾ?