Download Our App

Follow us

Home » ಸಿನಿಮಾ » ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ “ಮಾರ್ಟಿನ್” ಚಿತ್ರದ ಡಬ್ಬಿಂಗ್ ಮುಕ್ತಾಯ..!

ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ “ಮಾರ್ಟಿನ್” ಚಿತ್ರದ ಡಬ್ಬಿಂಗ್ ಮುಕ್ತಾಯ..!

ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸಿರುವ, ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ನಾಯಕರಾಗಿ
ನಟಿಸಿರುವ ಬಹು ನಿರೀಕ್ಷಿತ “ಮಾರ್ಟಿನ್” ಚಿತ್ರಕ್ಕೆ ಲೂಪ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ಮುಕ್ತಾಯವಾಗಿದೆ. ಸದ್ಯದಲ್ಲೇ ಚಿತ್ರದ ಪ್ರಥಮಪ್ರತಿ ಸಿದ್ದವಾಗಲಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರದ ಬಿಡುಗಡೆಗಾಗಿ ಧ್ರುವ ಸರ್ಜಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಚಿತ್ರೀಕರಣದಲ್ಲೂ “ಮಾರ್ಟಿನ್” ದಾಖಲೆ ಬರೆದಿದೆ. ಒಟ್ಟು 240 ದಿನಗಳ ಚಿತ್ರೀಕರಣ ನಡೆದಿದೆ. ಇನ್ನು ಚಿತ್ರದ ಆಡಿಯೋ ಹಕ್ಕನ್ನು ಅಧಿಕ ಮೊತ್ತ ನೀಡಿ ಜನಪ್ರಿಯ ಆಡಿಯೋ ಸಂಸ್ಥೆಯಾದ “ಸರೆಗಮಪ” ಪಡೆದುಕೊಂಡಿದೆ. ಮಣಿ ಶರ್ಮ ಅವರ ಸಂಗೀತ ನಿರ್ದೇಶನದಲ್ಲಿ ಎಲ್ಲಾ ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿದ್ದು, ರವಿ ಬಸ್ರೂರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

ಸತ್ಯ ಹೆಗಡೆ ಛಾಯಾಗ್ರಹಣ , ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನವಿರುವ “ಮಾರ್ಟಿನ್” ಚಿತ್ರದ ತಾರಾಬಳಗದಲ್ಲಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಅನ್ವೇಶಿ ಜೈನ್, ಜಾರ್ಜಿಯ ಆಂಡ್ರಿಯಾನಿ ,ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಪಾಠಕ್ ಮುಂತಾದವರಿದ್ದಾರೆ.

ಇದನ್ನೂ ಓದಿ : ಚಿತ್ರದುರ್ಗ : ಬೇಲಿಗೆ ಬೆಂಕಿ ಹಚ್ಚಿ ಮಕ್ಕಳಿಬ್ಬರನ್ನು ನೂಕಿ ತಾನೂ ಆ*ತ್ಮಹ*ತ್ಯೆ ಮಾಡಿಕೊಂಡ ತಾಯಿ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here