ಒಲಿಂಪಿಕ್ಸ್ ಶೂಟಿಂಗ್‌ನಲ್ಲಿ 2 ಕಂಚಿನ ಪದಕ ಗೆದ್ದ ಮನು ಭಾಕರ್ ಮತ್ತು ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದ ಡಿ ಗುಕೇಶ್ ಅವರಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆಯಾಗಿದೆ.
ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಕೂಡ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಸ್ತುತ ಭಾರತ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಅವರ ನಾಯಕತ್ವದಲ್ಲಿ ಭಾರತ ತಂಡ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದುಕೊಂಡಿತ್ತು. ಹಾಗೆಯೇ ಕಳೆದ ವರ್ಷ ನಡೆದಿದ್ದ ಪ್ಯಾರಾಲಿಂಪಿಕ್ಸ್ನಲ್ಲಿ ಹೈಜಂಪ್ ಟಿ64 ಸ್ಪರ್ಧೆಯಲ್ಲಿ ದೇಶಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದ ಪ್ರವೀಣ್ ಕುಮಾರ್ ಅವರಿಗೂ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ.
ಆರಂಭದಲ್ಲಿ ಖೇಲ್ ರತ್ನ ಪ್ರಶಸ್ತಿ ಪಟ್ಟಿಯಲ್ಲಿ ಮನು ಭಾಕರ್ ಹೆಸರು ಇಲ್ಲ ಎಂದು ವರದಿಯಾಗಿತ್ತು. ಈ ಬೆನ್ನಲ್ಲೇ ಮನು ಭಾಕರ್ ಅವರ ತಂದೆ ಕ್ರೀಡಾ ಸಚಿವಾಲಯದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಕ್ರೀಡಾ ಸಚಿವಾಲಯ ಈಗ ಅಧಿಕೃತವಾಗಿ ಪಟ್ಟಿ ಪ್ರಕಟಿಸುವ ಮೂಲಕ ಎದ್ದಿದ್ದ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದೆ.
ಜನವರಿ 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
ಇದನ್ನೂ ಓದಿ : ನ್ಯಾಷನಲ್ ಕ್ರಶ್ ಮೇಲೆ ಡಿವೈನ್ ಸ್ಟಾರ್ಗೆ ಇನ್ನೂ ಕಡಿಮೆಯಾಗಿಲ್ವಾ ಕೋಪ? ಪೋಸ್ಟರ್‌ನಲ್ಲಿ ರಶ್ಮಿಕಾ ಹೆಸರೇ ಗಾಯಬ್..!