ಬೆಂಗಳೂರು : ಅಪೆಕ್ಸ್ ಬ್ಯಾಂಕ್ನಲ್ಲಿ 2,000 ಕೋಟಿ ರೂ.ಗೂ ಅಧಿಕ ಹಣದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆಎನ್ ರಾಜಣ್ಣ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲಹಳ್ಳಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಈ ಕೇಸ್‌ಗೆ ಸಂಬಂಧಿಸಿದಂತೆ ಹಾಲಿ ಸಚಿವ ಕೆ ಎನ್ ರಾಜಣ್ಣ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಕೋರ್ಟ್ ಮೂರು ತಿಂಗಳಲ್ಲಿ ಪ್ರಕರಣ ಇತ್ಯರ್ಥ ಮಾಡುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿತ್ತು. ಅದರೆ, ಸರ್ಕಾರ ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ಪತ್ರಬರೆದಿದ್ದಾರೆ.
ರಾಜ್ಯ ಅಪೆಕ್ಸ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಸಿಎನ್ ದೇವರಾಜ್ ಅವರು ಖಾಸಗಿ ವ್ಯಕ್ತಿಗಳು, ವಾಣಿಜ್ಯ ಸಂಸ್ಥೆಗಳು, ಟ್ರಸ್ಟ್‌ಗಳಿಗೆ ಯಾವುದೇ ಜಾಮೀನು ಮತ್ತು ಭದ್ರತೆ ಪಡೆಯದೇ ಕಟ್ಟಡ ನಿರ್ಮಾಣ ಕಂಪನಿ, ಚಿನ್ನದ ಅಂಗಡಿ, ಸಕ್ಕರೆ ಕಾರ್ಖಾನೆಗಳಿಗೆ ನೂರಾರು ಕೋಟಿ ರೂಪಾಯಿ ನೀಡಲಾಗಿದೆ. ಈ ಸಾಲದ ವ್ಯವಹಾರದಲ್ಲಿ ಅವ್ಯವಹಾರ ನಡೆದಿದ್ದು, ಇದು ತನಿಖೆಯಿಂದಲೂ ಸಾಬೀತಾಗಿದೆ. ಈ ಎಲ್ಲಾ ಪ್ರಕರಣಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ದಿನೇಶ್ ಕಲಹಳ್ಳಿ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ‘ಒಂದೇ ದೇಶ ಒಂದೇ ಎಲೆಕ್ಷನ್’ಗೆ ನಿರ್ಧಾರ – ಕೋವಿಂದ್ ವರದಿಗೆ ಒಪ್ಪಿಗೆ ನೀಡಿದ ಕೇಂದ್ರ ಸಂಪುಟ..!