Download Our App

Follow us

Home » ಅಪರಾಧ » ಕೊಲೆ ಪ್ರಕರಣದಲ್ಲಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಡಲ್​ವುಡ್ ನಿರ್ದೇಶಕ ಅರೆಸ್ಟ್..​!

ಕೊಲೆ ಪ್ರಕರಣದಲ್ಲಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಡಲ್​ವುಡ್ ನಿರ್ದೇಶಕ ಅರೆಸ್ಟ್..​!

ಬೆಂಗಳೂರು : ಕೊಲೆ ಕೇಸ್‌ನಲ್ಲಿ 20 ವರ್ಷಗಳಿಂದ ತಲೆ ತಲೆಮರೆಸಿಕೊಂಡಿದ್ದ ಸಿನಿಮಾ ನಿರ್ದೇಶಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅರಸಯ್ಯನ ಶಿಷ್ಯ ಗಜೇಂದ್ರ ಅಲಿಯಾಸ್ ಗಜ ಬಂಧಿತ ಆರೋಪಿ.

ಗಜೇಂದ್ರ ಸ್ಯಾಂಡಲ್​ವುಡ್ ಮಾತ್ರವಲ್ಲದೆ ಕಾಲಿವುಡ್ ಸಿನಿಮಾ ಇಂಡಸ್ಟ್ರಿಯಲ್ಲೂ ಒಂದೆರಡು ಸಿನಿಮಾ ಮಾಡಿದ್ದ. 2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್​ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಈ ಕೊಲೆ ಕೇಸ್​​ನಲ್ಲಿ ಚಂದ್ರಪ್ಪ, ಅಲ್ಯೂಮಿನಿಯಂ ಬಾಬು ಜೊತೆಗೆ ನಿರ್ದೇಶಕ ಗಜೇಂದ್ರ ಎಂಟನೇ ಆರೋಪಿಯಾಗಿದ್ದ. ಕೊಲೆ ಕೇಸ್​ನಲ್ಲಿ ಬಂಧಿತನಾಗಿದ್ದ ಗಜೇಂದ್ರಗೆ ಕೋರ್ಟ್ 1 ವರ್ಷ ಶಿಕ್ಷೆ ಕೂಡ ವಿಧಿಸಿತ್ತು. ಒಂದು ವರ್ಷ ಜೈಲುವಾಸ ಅನುಭವಿಸಿದ ಗಜೇಂದ್ರ ಬಳಿಕ ಜಾಮೀನು ಪಡೆದು ಹೊರಬಂದಿದ್ದ.

ಜಾಮೀನು ಪಡೆದ ಬಳಿಕ ಹಲವು ವರ್ಷಗಳಿಂದ ಕೋರ್ಟ್​ಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. 20 ವರ್ಷಗಳಿಂದ ಪೊಲೀಸರ ಕೈಗೆ ಸಿಕ್ಕಿಲ್ಲ. ಈ ಹಿಂದೆ ಪುಟಾಣಿಪವರ್ ಹಾಗೂ ರುದ್ರ ಎಂಬ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ. ಅಷ್ಟೇ ಅಲ್ಲದೇ ತಮಿಳಿನಲ್ಲಿ ಒಂದೆರಡು ಸಿನಿಮಾ ಮಾಡಿರೋದಾಗಿ ಹೇಳಿಕೊಂಡಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಇದೀಗ ಗಜೇಂದ್ರನನ್ನು ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು : ಪಂಚೆ ಧರಿಸಿ ಬಂದ ರೈತನಿಗೆ ಜಿ.ಟಿ ಮಾಲ್​ ಅವಮಾನ – ಒಳ ಬಿಡದೆ ದರ್ಪ ತೋರಿದ ​​​ಸಿಬ್ಬಂದಿ..!

 

 

 

Leave a Comment

DG Ad

RELATED LATEST NEWS

Top Headlines

ಬೆಂಗಳೂರಿನ M.S.ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ..!

ಬೆಂಗಳೂರು : ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಗಳಲ್ಲಿ ಒಂದಾಗಿರುವ M.S.ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರೋಗಿಗಳು, ಆಸ್ಪತ್ರೆ ಸಿಬ್ಬಂದಿಗೆ ತೀವ್ರ

Live Cricket

Add Your Heading Text Here