ಬೆಂಗಳೂರು : ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಚೆನ್ನೈ ಆಸ್ಪತ್ರೆಯಿಂದ ಇಂದು ಬೆಳಿಗ್ಗೆ ಡಿಸ್ಟಾರ್ಜ್ ಆಗಿದ್ದು, ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.
ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕುಮಾರಸ್ವಾಮಿ ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯಾಗಿದೆ. ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಮತ್ತು ಅಮೆರಿಕದಿಂದ ಆಗಮಿಸಿದ ವೈದ್ಯರ ತಂಡದಿಂದ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಸದ್ಯ ಕುಮಾರಸ್ವಾಮಿಯವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ.
ಇಂದು ಬೆಳಗ್ಗೆ ಡಿಸ್ಟಾರ್ಜ್ ಆಗಿ ಕುಮಾರಸ್ವಾಮಿ ಅವರು, ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅಲ್ಲಿಂದ ನೇರವಾಗಿ ಜೆ.ಪಿ.ನಗರದ ನಿವಾಸಕ್ಕೆ ತೆರಳಿದ್ದಾರೆ. ವೈದ್ಯರ ಸಲಹೆಯ ಮೇರೆಗೆ ಇನ್ನು ಮೂರ್ನಾಲ್ಕು ದಿನಗಳ ಕಾಲ ಮನೆಯಲ್ಲಿಯೇ ವಿಶ್ರಾಂತಿ ಪಡೆದು, ಹೆಚ್‌ಡಿಕೆ ಮತ್ತೆ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಧುಮಕಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Post Views: 152