ಸ್ಯಾಂಡಲ್‌ವುಡ್ ನಲ್ಲಿ ಚಂದನ್ ಶೆಟ್ಟಿ ನಿವೇದಿತಾ ಗೌಡ ವಿಚ್ಚೇದನ ಪಡೆದುಕೊಂಡ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಕನ್ನಡ ಚಿತ್ರರಂಗದ ನಟ ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ಬೈರಪ್ಪ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ. ಇಬ್ಬರೂ ಬೇರೆ ಬೇರೆಯಾಗಿದ್ದು ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಯುವರಾಜ್ ಪತ್ನಿ ಶ್ರೀದೇವಿ ಭೈರಪ್ಪಗೆ ಕೋರ್ಟ್ನಿಂದ ನೋಟಿಸ್ ಜಾರಿಯಾಗಿದೆ.
ಇದೀಗ ಯುವರಾಜ್ ಕುಮಾರ್ ಡಿವೋರ್ಸ್ ವಿಚಾರಕ್ಕೆ ಬಿಟಿವಿಗೆ ಮೊದಲ ರಿಯಾಕ್ಷನ್ ನೀಡಿದ ದೊಡ್ಮನೆ ಸೊಸೆ ಶ್ರೀದೇವಿ ಅವರು, ವಿಷಯ ಏನೆಂದು ಚಿತ್ರರಂಗ ಹಾಗೂ ಮಾಧ್ಯಮದಲ್ಲಿ ಅನೇಕರಿಗೆ ತಿಳಿದಿದೆ. ನಾನು ಈಗಾಗಲೇ legal ನೋಟಿಸ್‌ಗೆ ಉತ್ತರಿಸಿದ್ದೇನೆ.
ಇನ್ನು ವಿಚ್ಛೇದನದ ಅರ್ಜಿಯು ಇನ್ನೂ ನನಗೆ ತಲುಪಿಲ್ಲ, ಸಿಕ್ಕಾಗ ನ್ಯಾಯಾಲಯಕ್ಕೆ ಉತ್ತರಿಸುತ್ತೇನೆ. ಸದ್ಯಕ್ಕೆ ನಾನು ಬೇರೇನೂ ಮಾತನಾಡುವ ಮಾನಸಿಕ ಪರಿಸ್ಥಿತಿಯಲ್ಲಿ ಇಲ್ಲ. ಈ ಸಮಯದಲ್ಲಿ ನೀವು ನನ್ನ ಮತ್ತು ನನ್ನ ಕುಟುಂಬದ ಗೌಪ್ಯತೆಯನ್ನು ಅರ್ಥಮಾಡಿಕೊಳ್ಳುತ್ತೀರಿ ಮತ್ತು ಗೌರವಿಸುತ್ತೀರಿ ಎಂದು ನಾನು ಭಾವಿಸುತ್ತೇನೆ ಎಂದಿ ತಿಳಿಸಿದ್ದಾರೆ.
ಇದನ್ನೂ ಓದಿ : ನಟ ಯುವರಾಜ್‌ಕುಮಾರ್ ಸಂಸಾರದಲ್ಲಿ ಹುಳಿ ಹಿಂಡಿದ್ರಾ ಕನ್ನಡದ ಆ ನಟಿ?