ವಿಜಯನಗರ : ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್‌ನ ಚೈನ್ ಕಟ್ ಆದ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಭೇಟಿ ಕೊಟ್ಟಿದ್ದಾರೆ. ಗೇಟ್ ಲಿಂಕ್ ಚೈನ್ ಕಟ್ ಆಗಿರುವುದನ್ನು ಪರಿಶೀಲಿಸಿದ ಡಿಕೆ ಶಿವಕುಮಾರ್ ಅವರಿಗೆ ಡ್ಯಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಲಾಯಶಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ಗೇಟ್ ಲಿಂಕ್ ಚೈನ್ ಕಟ್ ಆಗಿರುವುದನ್ನು ಖುದ್ದು ಪರಿಶೀಲನೆ ನಡೆಸಿದರು. ಡ್ಯಾಂ ನೀಲನಕ್ಷೆಯನ್ನು ತೋರಿಸಿದ ಅಧಿಕಾರಿಗಳು ಡಿಸಿಎಂಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.
ಇನ್ನು ಜಲಾಶಯ ವೀಕ್ಷಣೆಗೆ ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಬಳ್ಳಾರಿ, ವಿಜಯನಗರ, ಕೊಪ್ಪಳದ ಸಂಸದರು, ಶಾಸಕರು ಹಾಗೂ ಟಿಬಿ ಬೋರ್ಡ್ ಅಧಿಕಾರಿಗಳು ಸಾಥ್ ನೀಡಿದ್ದಾರೆ. ಜಲಾಶಯ ವೀಕ್ಷಣೆ ಬಳಿಕ ಡಿಸಿಎಂ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ಇದನ್ನು ಓದಿ : ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕಟ್ ವಿಚಾರ – ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಿಎಂ ಸಿದ್ದು..!
Post Views: 86