Download Our App

Follow us

Home » ಅಪರಾಧ » ಡಿಕೆ ಶಿವಕುಮಾರ್ ವಿರುದ್ದ ಆಸ್ತಿ ಗಳಿಕೆ ಕೇಸ್ : ಫೆ. 29ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ..!

ಡಿಕೆ ಶಿವಕುಮಾರ್ ವಿರುದ್ದ ಆಸ್ತಿ ಗಳಿಕೆ ಕೇಸ್ : ಫೆ. 29ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ..!

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿತ್ತು.  ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆದಿದೆ.

ಹೈಕೋರ್ಟ್ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್‌ ಮತ್ತು ಉಮೇಶ್‌ ಎಂ. ಅಡಿಗ ಅವರ ನೇತೃತ್ವದಲ್ಲಿ ವಿಭಾಗೀಯ ಪೀಠದಿಂದ ವಿಚಾರಣೆ ನಡೆದಿದೆ. ಡಿಕೆ ಶಿವಕುಮಾರ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡಿದ್ದಾರೆ. ಈ ವೇಳೆ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿಯವರು ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ವಕೀಲ ದಳವಾಯಿ ವೆಂಕಟೇಶ್‌ ಆಕ್ಷೇಪಣೆಯ ಪ್ರತಿ ನಮಗೆ ದೊರತಿಲ್ಲ ಎಂದಿದ್ದು, ಈ ವೇಳೆ ವಕೀಲ ದಳವಾಯಿ ಕಚೇರಿ ಆಕ್ಷೇಪಣೆ ಸರಿಪಡಿಸಲು ಒಂದು ವಾರ ಕಾಲಾವಕಾಶ ಕೋರಿದ್ದಾರೆ. ನ್ಯಾಯಾಲಯ ಅಡ್ವೊಕೇಟ್‌ ಜನರಲ್‌ಗೆ ಆಕ್ಷೇಪಣೆ ಸಲ್ಲಿಸಲು ತಿಳಿಸಿದೆ.

ಈ ಮಧ್ಯೆ ಲೋಕಾಯುಕ್ತ ಎಡಿಜಿಪಿ ಮಧ್ಯಪ್ರವೇಶಿಕೆ ಕೋರಿರುವ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, ಲೋಕಾಯುಕ್ತದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವೆಂಕಟೇಶ್‌ ಅರಬಟ್ಟಿ ಹಾಜರಾಗಿದ್ದರು. ಈ ಸಂಬಂಧ ವಿಚಾರಣೆಯನ್ನು ನ್ಯಾಯಾಲಯ ಫೆ. 29ಕ್ಕೆ ಮುಂದೂಡಿದೆ.

ಇದನ್ನೂ ಓದಿ : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಭೇಟಿಯಾದ ಸಿ.ಪಿ. ಯೋಗೇಶ್ವರ್..!

Leave a Comment

DG Ad

RELATED LATEST NEWS

Top Headlines

ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ.. ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್..!

ಬೆಂಗಳೂರು : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದು ನಿನ್ನೆ

Live Cricket

Add Your Heading Text Here