ದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.
ಯತ್ನಾಳ್ ಸಲ್ಲಿಸಿದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ, ಅರ್ಜಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ. ಅಲ್ಲದೇ ರಾಜ್ಯ ಸರ್ಕಾರ, ಲೋಕಾಯುಕ್ತ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ನ್ಯಾ. ಸೂರ್ಯಕಾಂತ್, ಉಜ್ವಲ್ ಭುಯಾನ್ ಅವರಿದ್ದ ಸುಪ್ರೀಂ ಕೋರ್ಟ್ ದ್ವಿಸದಸ್ಯಪೀಠ ಅರ್ಜಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಿದ್ದಾರೆ.
ಇದನ್ನೂ ಓದಿ : ಟೊಮ್ಯಾಟೋನಲ್ಲಿ ಲಾಸ್.. ಲ್ಯಾಪ್ಟಾಪ್ ಕದ್ದು ಕಾಸ್ – ಬೆಂಗಳೂರಲ್ಲಿ ಐನಾತಿ ಕಳ್ಳನನ್ನು ಬಂಧಿಸಿದ ಪೊಲೀಸರು..!
Post Views: 40