ರಾಮನಗರ : ಚನ್ನಪಟ್ಟಣ ಉಪಚುನಾವಣೆಯ ದಿನಾಂಕ ಘೋಷಣೆಗೂ ಮುನ್ನ ಚುನಾವಣೆ ಕದನ ರಂಗು ಪಡೆದುಕೊಳುತ್ತಿದೆ. ಇದೀಗ ಚನ್ನಪಟ್ಟಣ ಬೈ ಎಲೆಕ್ಷನ್ ಟಾರ್ಗೆಟ್ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚನ್ನಪಟ್ಟಣದಲ್ಲೇ ಧ್ವಜಾರೋಹಣ ಮಾಡುವ ಮೂಲಕ ಹೆಚ್ಡಿಕೆಗೆ ಟಕ್ಕರ್ ಕೊಟ್ಟಿದ್ದಾರೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರಕ್ಕೆ ಉಪ ಚುನಾವಣೆ ನಿಗದಿಯಾಗುವುದೊಂದೇ ಬಾಕಿ. ಇಲ್ಲಿ ಶಾಸಕರಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಗೆದ್ದು ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಹೀಗಾಗಿ ಚನ್ನಪಟ್ಟಣ ಕೈವಶ ಮಾಡಿಕೊಳ್ಳಲು ಪ್ಲಾನ್ ಮಾಡಿರುವ ಡಿಕೆಶಿ ಬೆಂಗಳೂರು ಬಿಟ್ಟು ಚನ್ನಪಟ್ಟಣದಲ್ಲಿ ಧ್ವಜಾರೋಹಣ ಮಾಡಿ ಚನ್ನಪಟ್ಟಣ ನಮ್ಮದೇ ಎನ್ನುವ ಬಿಗ್ ಮೆಸೇಜ್ ಕೊಡುತ್ತಿದ್ದಾರೆ.
ಬೆಂಗಳೂರು ಉಸ್ತುವಾರಿಯಾಗಿರುವ ಡಿಸಿಎಂ ಡಿಕೆಶಿ ಅವರು ತಾಲೂಕು ಮಟ್ಟದ ಕಾರ್ಯಕ್ರಮದಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಅಷ್ಟೇ ಅಲ್ಲದೆ ಡಿಕೆಶಿ ಜೊತೆಯಲ್ಲೇ ಈಗಾಗಲೇ ಸ್ಪರ್ಧೆಗಿಳಿಯುವುದು ಖಚಿತ ಎಂದು ಹೇಳಿರುವ ಟಿಕೆಟ್ ಆಕಾಂಕ್ಷಿಯೂ ಆಗಿರುವ ಬಿಜೆಪಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವೇದಿಕೆ ಮೇಲೆ ಕುಳಿತ್ತಿದ್ದರು.
ಇನ್ನು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಘೋಷಿಸಿರುವ ಡಿಕೆಶಿ ಇದೀಗ ಚನ್ನಪಟ್ಟಣದಲ್ಲಿ ಧ್ವಜಾರೋಹಣ ಮೂಲಕ ಮತ್ತೊಂದು ಚೆಕ್ಮೇಟ್ ಕೊಟ್ಟಿದ್ದಾರೆ. ಹೀಗಾಗಿ ಸ್ವಾತಂತ್ರ್ಯೋತ್ಸವ ನೆಪದಲ್ಲಿ ಚನ್ನಪಟ್ಟಣ ರಾಜಕೀಯ ಜಿದ್ದಾಜಿದ್ದಿ ಜೋರಾಗಿದೆ.
ಇದನ್ನೂ ಓದಿ : ಸ್ಯಾಂಡಲ್ವುಡ್ನಲ್ಲಿ ಗೌರಿ-ಗಣೇಶ ಅಬ್ಬರ : ‘ಕೃಷ್ಣಂ ಪ್ರಣಯ ಸಖಿ’- ‘ಗೌರಿ’ ಸೂಪರ್ ಹಿಟ್..!