ವಾಷಿಂಗ್ಟನ್ : ರಾಜ್ಯದಲ್ಲಿ ಸಿಎಂ ಕುರ್ಚಿ ಮುಸುಕಿನ ಗುದ್ದಾಟದ ಹೊತ್ತಲ್ಲೇ ಹೊಸ ಬೆಳವಣಿಗೆಯೊಂದು ನಡೆದಿದೆ. ಸಿಎಂ ಬದಲಾಗ್ತಾರಾ? ಈ ಪ್ರಶ್ನೆಗೆ ಉತ್ತರ ಸಿಗುವ ದಿನ ದೂರವಿಲ್ಲ ಎಂದು ಕಾಣುತ್ತಿದೆ. ಒಂದೆಡೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಕೇಸ್‌ನಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದರ ವಿರುದ್ಧ ಸಿದ್ಧರಾಮಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿಯನ್ನೂ ಸಲ್ಲಿಕೆ ಮಾಡಿದ್ದು, ಅದರ ವಿಚಾರಣೆ ನಡೆಯುತ್ತಿದೆ.
ಈ ನಡುವೆ ಕಾಂಗ್ರೆಸ್‌ನ ಹಿರಿಯ ನಾಯಕರೆಲ್ಲರೂ ಸಿಎಂ ಕುರ್ಚಿಗೆ ಟವಲ್ ಹಾಕಲು ಆರಂಭಿಸಿದ್ದಾರೆ. ಹಲವು ನಾಯಕರು ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಹಾಗೇನಾದರೂ ಸಿದ್ಧರಾಮಯ್ಯ ಸಿಎಂ ಸ್ಥಾನ ಬಿಟ್ಟಲ್ಲಿ ಇದಕ್ಕೆ ಪ್ರಬಲ ಆಕಾಂಕ್ಷಿಯಾಗಿರುವ ಡಿಸಿಎಂ ಡಿಕೆ ಶಿವಕುಮಾರ್, ಕೆಲ ದಿನಗಳ ಕಾಲ ಅಮೆರಿಕಕ್ಕೆ ವೈಯಕ್ತಿಕ ಭೇಟಿಗೆ ಹೋಗಿದ್ದಾರೆ. ಇದೇ ವೇಳೆ ಅಮೆರಿಕ ಪ್ರವಾಸದಲ್ಲಿರುವ ಲೋಕಸಭೆಯ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ. ಈ ಭೇಟಿಯೇ ಈಗ ಕುತೂಹಲಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ವಾಷಿಂಗ್ಟನ್‌ನಲ್ಲಿ ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ. ರಾಜ್ಯದಲ್ಲಿ ಸಿಎಂ ಕುರ್ಚಿ ಕಾಳಗ ತಾರಕಕ್ಕೆ ಏರಿರುವ ನಡುವೆಯೇ ಈ ನಾಯಕರ ಭೇಟಿ ಕುತೂಹಲ ಕೆರಳಿಸಿದೆ. ಡಿಕೆ ಶಿವಕುಮಾರ್ ಅವರು ಪತ್ನಿ ಉಷಾ ಸಮೇತ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಇನ್ನು ಭೇಟಿ ವೇಳೆ ರಾಜ್ಯ ರಾಜಕೀಯದ ಬಗ್ಗೆ ರಾಹುಲ್ ಗಾಂಧಿ ಜೊತೆ ಡಿಕೆಶಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಪಕ್ಷದ ಆಂತರಿಕ ವಿಚಾರ, ಮುಂದಿನ ಸಿಎಂ ಕೂಗಿನ ಬಗ್ಗೆಯೂ ರಾಹುಲ್ ಗಾಂಧಿ ಅವರು ಮಾಹಿತಿ ಪಡೆದಿದ್ದು, ಮುಡಾ ವಿಚಾರ, ಕೆಲ ಸಚಿವರು, ಶಾಸಕರ ಹೇಳಿಕೆಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಕಾಂಗ್ರೆಸ್ನಲ್ಲಿ ಕ್ಷಣಕ್ಕೊಂದು ಸ್ಫೋಟಕ ಬೆಳವಣಿಗೆ – ಸಿಎಂ ಚೇಂಜ್ ಗದ್ದಲದ ಮಧ್ಯೆ HDK ಭೇಟಿಯಾದ M.B.ಪಾಟೀಲ್..!