ಬೆಂಗಳೂರು : ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ ಇಂದು ಸಚಿವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟ ಆಯೋಜನೆ ಮಾಡಿದ್ದಾರೆ. ಸಂಸದ ಡಿಕೆ ಸುರೇಶ್ ನಿವಾಸದಲ್ಲಿ ಡಿನ್ನರ್ ಪಾರ್ಟಿ ಆಯೋಜನೆ ಮಾಡಿರುವ ಡಿಕೆ ಶಿವಕುಮಾರ್ ಅವರು ಬಿಬಿಎಂಪಿ ಸೇರಿದಂತೆ ಸ್ಥಳೀಯ ಚುನಾವಣೆ ತಯಾರಿ ಕುರಿತು ಚರ್ಚೆ ನಡೆಸಲಿದ್ದಾರೆ.
ಇಂದು ಸಂಜೆ 7 ಗಂಟೆಗೆ ಔತಣಕೂಟ ಆಯೋಜನೆ ಮಾಡಿರುವ ಡಿಕೆಶಿ ಅವರು, ಡಿನ್ನರ್ ಪಾರ್ಟಿಯಲ್ಲಿ ಶಿಕ್ಷಕರ, ಪದವೀಧರ ಕ್ಷೇತ್ರ ಚುನಾವಣೆ ಗೆಲುವಿಗಾಗಿ ತಂತ್ರಗಾರಿಕೆ ರೂಪಿಸಲಿದ್ದಾರೆ. ಇದರೊಂದಿಗೆ ಬಿಬಿಎಂಪಿ ಸೇರಿದಂತೆ ಸ್ಥಳೀಯ ಚುನಾವಣೆ ತಯಾರಿ ಕುರಿತು ಚರ್ಚೆ, ಲೋಕಸಭೆ ಚುನಾವಣೆ ರೀವ್ಯೂ ಹಾಗೂ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ಒಂದಷ್ಟು ಮಾತುಕತೆ ನಡೆಸುವ ಸಾಧ್ಯತೆಯಿದೆ.
ಇನ್ನು ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷದ ಬದಲಾವಣೆ ಕುರಿತು ಸುಳಿವು ನೀಡಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಮುಂದುವರೆಯುತ್ತಾರಾ ಅಥವಾ ಕೆಳಗಿಳೀತಾರಾ ಎನ್ನುವ ಚರ್ಚೆ ಕೂಡ ನಡೆಯಲಿದೆ. ಪ್ರಮುಖವಾಗಿ ಸಿಎಂ ಗಾದಿ ಮೇಲೆ ಕಣ್ಣಿಟ್ಟಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಚಿವರನ್ನು ವಿಶ್ವಾಸಕ್ಕೆ ಪಡೆಯಲು ಮುಂದಾಗಿದ್ದಾರೆ.
ಇದನ್ನೂ ಓದಿ : ಚೈನೀಸ್ ಹೋಟೆಲ್ ಹುಡುಗರ ‘ಚಿಲ್ಲಿ ಚಿಕನ್’ ಚಿತ್ರದ ಟೀಸರ್ ರಿಲೀಸ್..!