ಬೆಂಗಳೂರು : ಮಾಜಿ ಸಿಎಂ ಎಸ್.ಎಂ ಕೃಷ್ಣ ಇಂದು ವಿಧಿವಶರಾಗಿದ್ದಾರೆ. ಗಣ್ಯರ ದಂಡೇ ಎಸ್.ಎಂ ಕೃಷ್ಣ ಅವರ ದರ್ಶನಕ್ಕಾಗಿ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡುತ್ತಿದೆ. ಈಗ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಎಸ್.ಎಂ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರ ನೋಡಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಕ್ಕಿಬಿಕ್ಕಿ ಅತ್ತಿದ್ದಾರೆ.
ಡಿಕೆಶಿ ಟ್ವೀಟ್ : ಆತ್ಮೀಯರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಶ್ರೀ ಎಸ್.ಎಂ. ಕೃಷ್ಣ ಅವರ ನಿಧನದಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಕರ್ನಾಟಕದ ಪ್ರಗತಿಗೆ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ನನ್ನ ರಾಜಕೀಯ ಬೆಳವಣಿಗೆಗೂ ಸೂಕ್ತ ಮಾರ್ಗದರ್ಶನ ನೀಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಟ್ವೀಟ್ ಕೂಡ ಮಾಡಿದ್ದಾರೆ.
ಇದನ್ನೂ ಓದಿ : ಎಸ್.ಎಂ.ಕೃಷ್ಣ ಯುಗಾಂತ್ಯ.. ಯಡಿಯೂರಪ್ಪ, ಡಿಸಿಎಂ ಡಿಕೆಶಿ ಸೇರಿ ರಾಜಕೀಯ ಗಣ್ಯರಿಂದ ಸಂತಾಪ..!