ಮೈಸೂರು : ಮೈಸೂರಿನ ಮೌರ್ಯ ಆಸ್ಪತ್ರೆ ವೈದ್ಯರ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ 9ನೇ ತರಗತಿ ವಿದ್ಯಾರ್ಥಿನಿ ಲಕ್ಷ್ಮಿ ಮೃತ ದುರ್ದೈವಿ.
ಮೌರ್ಯ ಆಸ್ಪತ್ರೆ ವಿರುದ್ಧ ಲಕ್ಷ್ಮಿ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಹೊಟ್ಟೆನೋವು ಎಂದ ಕಾರಣ ಲಕ್ಷ್ಮಿಯನ್ನು ಪೋಷಕರು ಮೈಸೂರಿನ ಮೌರ್ಯ ಆಸ್ಪತ್ರೆ ದಾಖಲು ಮಾಡಿದ್ದರು. ಆಪರೇಷನ್ ಮಾಡಿದ ನಂತರ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದೆ.
ಇನ್ನು ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಕಾರಣ ಮೌರ್ಯ ಆಸ್ಪತ್ರೆ ಬಾಲಕಿಯನ್ನು ಬೇರೊಂದು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಆದರೆ ಇದೀಗ ಅನಸ್ತೇಷಿಯಾ ವ್ಯತ್ಯಾಸದಿಂದ ಬಾಲಕಿ ಸಾವನ್ನಾಪ್ಪಿದ್ದಾಳೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಯುವತಿ ಸಾವಿನಿಂದ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಆಸ್ಪತ್ರೆಯ ಮುಂಭಾಗದಲ್ಲಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಬಿಗ್ಬಾಸ್ಗೆ ಮತ್ತೆ ಸಂಕಷ್ಟ – ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ ಎಂದು ಗ್ರಾಮ ಪಂಚಾಯಿತಿ ಸ್ಪಷ್ಟನೆ..!