ಧನಂಜಯ್ ಒಡೆತನದ ಡಾಲಿ ಪಿಕ್ಚರ್ಸ್‌ನ ನಾಲ್ಕನೇ ಸಿನಿಮಾ ವಿದ್ಯಾಪತಿ. ಟೈಟಲ್ ಹಾಗೂ ಸ್ಯಾಂಪಲ್ಸ್ ನಿಂದಲೇ ಕುತೂಹಲ ದುಪ್ಪಟ್ಟು ಮಾಡಿರುವ ಈ ಚಿತ್ರದ ಶೂಟಿಂಗ್ ಮುಕ್ತಾಯಗೊಂಡಿದೆ. ವಿದ್ಯಾಪತಿಗೆ ಕುಂಬಳಕಾಯಿ ಪ್ರಾಪ್ತಿಯಾಗಿದೆ.
ಟಗರು ಪಲ್ಯ ಮೂಲಕ ಮಸ್ತ್ ಮನರಂಜನೆ ನೀಡಿದ್ದ ನಾಗಭೂಷಣ್ ನಾಯಕನಾಗಿ ನಟಿಸಿದ್ದು, ಉಪಾಧ್ಯಕ್ಷನ ಬೆಡಗಿ ಮಲೈಕಾ ವಸೂಪಾಲ್ ಜೋಡಿಯಾಗಿ ಸಾಥ್ ಕೊಟ್ಟಿದ್ದಾರೆ. ಕರಾಟೆ ಕಿಂಗ್ ಗೆಟಪ್ ನಲ್ಲಿ ನಾಗಭೂಷಣ್ ಕಾಣಿಸಿಕೊಂಡಿದ್ದು, ಅವರಿಗೆ ಮಾಸ್ಟರ್ ಆಗಿ ರಂಗಾಯಣ ರಘು ಅಭಿನಯಿಸಿದ್ದಾರೆ.
ಈ ಹಿಂದೆ ಇಕ್ಕಟ್ ಸಿನಿಮಾ ಮೂಲಕ ಭರವಸೆ ಹುಟ್ಟಿಸಿದ್ದ ಇಶಾಂ ಮತ್ತು ಹಸೀಂ ಖಾನ್ ವಿದ್ಯಾಪತಿ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಜೊತೆಗೆ ಸಿನಿಮಾವನ್ನು ಇವರೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ. ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ, ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಅರ್ಜುನ್ ಮಾಸ್ಟರ್ ಆಕ್ಷನ್ ವಿದ್ಯಾಪತಿ ಸಿನಿಮಾಕ್ಕಿದೆ.
ಡಾಲಿ ಧನಂಜಯ್ ವಿದ್ಯಾಪತಿ ಚಿತ್ರಕ್ಕೂ ದುಡ್ಡು ಹಾಕುತ್ತಿದ್ದಾರೆ. ಟಗರು ಪಲ್ಯ ಸಿನಿಮಾ ಬಳಿಕ ಈ ಸಿನಿಮಾ ಪ್ರೊಡ್ಯೂಸ್ ಮಾಡುತ್ತಿದ್ದಾರೆ. ಇನ್ನುಳಿದಂತೆ ವಿದ್ಯಾಪತಿ ಸಿನಿಮಾದಲ್ಲಿ ಆ್ಯಕ್ಷನ್ ಇದೆ. ಹಾಸ್ಯದ ಹೊನಲು ಇರಲಿದೆ. ಸದ್ಯ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಶೀಘ್ರದಲ್ಲೇ ಪ್ರಚಾರ ಕಾರ್ಯವನ್ನು ಆರಂಭಿಸಲಿದೆ.
ಇದನ್ನೂ ಓದಿ : ‘ಮರ್ಫಿ’ಯಿಂದ ಬಂತು ಡ್ಯಾನ್ಸಿಂಗ್ ನಂಬರ್.. ಅಕ್ಟೋಬರ್ 18ಕ್ಕೆ ಸಿನಿಮಾ ತೆರೆಗೆ..!