ಬೆಂಗಳೂರು : ಶೀಲ ಶಂಕಿಸಿ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಆರ್‌ಬಿಐ ಲೇಔಟ್ ಸಮೀಪದ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ. 40 ವರ್ಷದ ಪೈತಮ್ಮ, 20 ವರ್ಷದ ಗಣೇಶ್ ಕುಮಾರ್ ಕೊಲೆಯಾದವರು. 45 ವರ್ಷದ ಗೊಲ್ಲಬಾಬು ಆತ್ಮಹತ್ಯೆ ಮಾಡಿಕೊಂಡ ಹಂತಕ.
ನಿರ್ಮಾಣ ಹಂತದ ಕಟ್ಟಡದಲ್ಲಿ ಮರದ ತುಂಡಿನಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನ ಮೇಲೆ ಹಲ್ಲೆ ನಡೆಸಿ, ಪತಿ ಗೊಲ್ಲಬಾಬು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಡಬಲ್ ಮರ್ಡರ್ ಮಾಡಿದ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪೈತಮ್ಮ, ಗೊಲ್ಲಬಾಬು ದಂಪತಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡ್ತಿದ್ದರು. ಗೊಲ್ಲಬಾಬುವಿಗೆ ಮೊದಲೇ ಹೆಂಡತಿಗೆ ಮೇಲೆ ಅಕ್ರಮ ಸಂಬಂಧದ ಅನುಮಾನವಿತ್ತು. ನಿನ್ನೆ ತಡ ರಾತ್ರಿಯಲ್ಲಿ ಗಣೇಶ್ ಕುಮಾರ್ ಜೊತೆಗಿದ್ದ ಹೆಂಡತಿಯನ್ನು ಕಂಡ ಗೊಲ್ಲಬಾಬು, ಮರದ ತುಂಡಿನಿಂದ ಬಡಿದು ಇಬ್ಬರನ್ನು ಕೊಲೆ ಮಾಡಿದ್ದಾನೆ. ನಂತರ ನೇಣು ಬಿಗಿದುಕೊಂಡು ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಸಿಜೆಐ ಹುದ್ದೆಗೆ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು ಮಾಡಿದ ಸುಪ್ರೀಂಕೋರ್ಟ್ನ ಮುಖ್ಯ ನ್ಯಾ. ಡಿವೈ ಚಂದ್ರಚೂಡ್..!