ಹಾಸನ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ತಂದೆ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ಬೇಲೂರು ತಾಲ್ಲೂಕಿನ, ಕೊರಟಿಗೆರೆ ಗ್ರಾಮದಲ್ಲಿ ನಡೆದಿದೆ. 46 ವರ್ಷದ ದಯಾನಂದ ಮೃತ ವ್ಯಕ್ತಿ.
ಮಗಳನ್ನು ಶಾಲೆಗೆ ಬಿಡಲೆಂದು ಚಿಕ್ಕಮಗಳೂರಿನಿಂದ ಬೇಲೂರಿಗೆ ಕಾರಿನಲ್ಲಿ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ದಯಾನಂದ ಸಾವನ್ನಪ್ಪಿದ್ರೆ, 16 ವರ್ಷದ ಮಗಳು ನಿಶ್ಮಿತಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಗಾಯಳು ನಿಶ್ಮಿತಾರನ್ನು ಬೇಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೇಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ರೇವಣ ಸಿದ್ದೇಶ್ವರ ಬೆಟ್ಟದಲ್ಲಿ ‘ಕುಲದಲ್ಲಿ ಕೀಳ್ಯಾವುದೊ’ ಚಿತ್ರಕ್ಕೆ ಭರ್ಜರಿ ಕ್ಲೈಮ್ಯಾಕ್ಸ್..!
Post Views: 353