ಬಿಗ್‌ಬಾಸ್ ಸೀಸನ್ 10ರ ರನ್ನರ್ ಅಪ್ ಡ್ರೋನ್ ಪ್ರತಾಪ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೆಸರು ಹೇಳಿಕೊಂಡು ಡ್ರೋನ್ ಪ್ರತಾಪ್ ವಂಚಿಸಿದ್ದಾರೆ ಎಂದು ಮಂಡ್ಯದ ಚಂದನ್ ಕುಮಾರ್ ಗೌಡ ಎಂಬುವವರು ಆರೋಪಿಸಿದ್ದಾರೆ.
ಚಂದನ್ ಕುಮಾರ್ ಗೌಡ ಎಂಬುವವರಿಗೆ ಡ್ರೋನ್ ಪ್ರತಾಪ್ ಅವರಿಂದ 2 ಲಕ್ಷ ರೂಪಾಯಿ ಹಣ ವಂಚನೆ ಆಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವ ನೆಪದಲ್ಲಿ ವಂಚನೆ ಮಾಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಚಂದನ್ ಕುಮಾರ್ ಅವರು ದೂರು ನೀಡಿದ್ದಾರೆ.
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ಪರಿಚಯವಿದೆ. ನಾನು ಆಗಾಗ ಕುಮಾರಸ್ವಾಮಿಯವರ ಫಾರ್ಮ್ ಹೌಸ್‌ಗೆ ಹೋಗಿ ಭೇಟಿಯಾಗುತ್ತೇನೆಂದು ಡ್ರೋನ್ ಪ್ರತಾಪ್ ಹೇಳಿದ್ದರಂತೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಡ್ರೋನ್ ಪ್ರತಾಪ್ ವಂಚಿಸಿಸಿದ್ದಾರೆ ಎನ್ನಲಾಗಿದೆ.
ಬಿಗ್ ಬಾಸ್‌ನಿಂದ ಹೊರ ಬಂದ ನಂತರ ಡ್ರೋನ್ ಪ್ರತಾಪ್ ಅವರು ನನ್ನ ಕರೆ ಸ್ವೀಕರಿಸುತ್ತಿಲ್ಲ. ಹಣ ಹಿಂದಿರುಗಿಸದೆ ವಂಚಿಸಿದ್ದಾರೆ. ಹೀಗಾಗಿ ಡ್ರೋನ್ ಪ್ರತಾಪ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಚಂದನ್ ಕುಮಾರ್ ಗೌಡ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಅಡ್ವಾಣಿಗೆ ‘ಭಾರತ ರತ್ನ’ ಗೌರವ – ಅಯೋಧ್ಯೆಯಿಂದ ಸಂತಸ ವ್ಯಕ್ತಪಡಿಸಿದ ಪೇಜಾವರ ಶ್ರೀ..!