Download Our App

Follow us

Home » ಮೆಟ್ರೋ » ಡ್ರಂಕ್ ಅಂಡ್ ಡ್ರೈವ್ ಬೇಟೆಗೆ ಇಳಿದ ಟ್ರಾಫಿಕ್ ಪೊಲೀಸರು​​ – ಒಂದೇ ರಾತ್ರಿಯಲ್ಲಿ 324 ಕೇಸ್ ದಾಖಲು..!

ಡ್ರಂಕ್ ಅಂಡ್ ಡ್ರೈವ್ ಬೇಟೆಗೆ ಇಳಿದ ಟ್ರಾಫಿಕ್ ಪೊಲೀಸರು​​ – ಒಂದೇ ರಾತ್ರಿಯಲ್ಲಿ 324 ಕೇಸ್ ದಾಖಲು..!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಕುಡಿದು ವಾಹನ ಚಲಾಯಿಸೋದರಿಂದ ಅಪಘಾತಗಳು ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕಲು ನಗರ ಸಂಚಾರ ಪೊಲೀಸರು ದಿಟ್ಟ ಕ್ರಮವನ್ನು ತೆಗೆದುಕೊಂಡಿದ್ದಾರೆ. ನಿನ್ನೆ ಒಂದೇ ದಿನದಲ್ಲಿ 324 ಡ್ರಂಕ್ & ಡ್ರೈವ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿನ್ನೆ ನಗರದೆಲ್ಲೆಡೆ 697 ಪೊಲೀಸ್ ಸಿಬ್ಬಂದಿಯಿಂದ 18,769ವಾಹನ ಚಾಲಕರ ತಪಾಸಣೆ ನಡೆದಿದ್ದು, ಈ ಪೈಕಿ 324 ಮಂದಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿರೋದು ಪತ್ತೆಯಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ಮಾಹಿತಿ ನೀಡಿದ್ದಾರೆ.

ಎಂಜಿ ರಸ್ತೆ, ಹೆಬ್ಬಾಳ, ಇಂದಿರಾನಗರ, ಕೋರಮಂಗಲ, ಮಲ್ಲೇಶ್ವರ, ಉಪ್ಪಾರಪೇಟೆ ಸೇರಿದಂತೆ ನಗರದದ್ಯಾಂತ ತಪಾಸಣೆ ನಡೆಸಿದ್ದಾರೆ. ಈ ಪೈಕಿ 324 ಮಂದಿ ಮದ್ಯ ಸೇವಿಸಿ ವಾಹನ ಚಾಲನೆ ಪತ್ತೆಯಾಗಿದೆ. ಒಂದೇ ರಾತ್ರಿಯಲ್ಲಿ ದಾಖಲೆಯ 324 ಡ್ರಂಕ್ & ಡ್ರೈವ್ ಕೇಸ್ ರಿಜಿಸ್ಟರ್ ಆಗಿದೆ.

ಇದನ್ನೂ ಓದಿ : ಝಿಯೂ ಹೋಮ್ಸ್​​​ ಹೆಸರಲ್ಲಿ ನೂರಾರು ಮನೆ ಮಾಲೀಕರಿಗೆ ವಂಚಿಸಿದ್ದ ಖತರ್ನಾಕ್ ದಂಪತಿ ಅರೆಸ್ಟ್​..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here