Download Our App

Follow us

Home » ಸಿನಿಮಾ » ರಾಗಿಣಿ ದ್ವಿವೇದಿ ನಟನೆಯ ಬಹುನಿರೀಕ್ಷಿತ “ಬಿಂಗೊ” ಚಿತ್ರದ ಡಬ್ಬಿಂಗ್ ಕಂಪ್ಲೀಟ್​..!

ರಾಗಿಣಿ ದ್ವಿವೇದಿ ನಟನೆಯ ಬಹುನಿರೀಕ್ಷಿತ “ಬಿಂಗೊ” ಚಿತ್ರದ ಡಬ್ಬಿಂಗ್ ಕಂಪ್ಲೀಟ್​..!

“ಶಂಭೋ ಶಿವ ಶಂಕರ” ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದಲ್ಲಿ, ಆರ್​.ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ನಾಯಕ-ನಾಯಕಿಯಾಗಿ ನಟಿಸಿರುವ “ಬಿಂಗೊ” ಚಿತ್ರದ ಡಬ್ಬಿಂಗ್ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಮುಕ್ತಾಯವಾಗಿದೆ.

ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಮೇ 24 ರಂದು ನಟಿ ರಾಗಿಣಿ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ “ಬಿಂಗೊ” ಚಿತ್ರತಂಡ ರಾಗಿಣಿ ಅವರಿಗೆ ಶುಭಾಶಯ ತಿಳಿಸಿದೆ. ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ , ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಈ ಚಿತ್ರದಲ್ಲಿದೆ. ಸದ್ಯದಲ್ಲೇ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಹಾಗೂ ವೆಂಕಿ ಸಂಕಲನ “ಬಿಂಗೊ” ಚಿತ್ರಕ್ಕಿದೆ.

ಇದನ್ನೂ ಓದಿ : ಕಲಬುರಗಿ : ಅತ್ತಿಗೆಯಿಂದ ದೂರ ಇರು ಎಂದಿದ್ದಕ್ಕೆ ಮೈದುನನ ಬರ್ಬರ ಹತ್ಯೆ..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here