Download Our App

Follow us

Home » ಸಿನಿಮಾ » ಸಕಲ ಸರ್ಕಾರಿ ಗೌರವದೊಂದಿಗೆ ದ್ವಾರಕೀಶ್ ಅಂತ್ಯಕ್ರಿಯೆ : ರಾಜ್ಯ ಸರ್ಕಾರ ಆದೇಶ..!

ಸಕಲ ಸರ್ಕಾರಿ ಗೌರವದೊಂದಿಗೆ ದ್ವಾರಕೀಶ್ ಅಂತ್ಯಕ್ರಿಯೆ : ರಾಜ್ಯ ಸರ್ಕಾರ ಆದೇಶ..!

ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್​ ಅವರ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು, ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ದ್ವಾರಕೀಶ್ ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗದಲ್ಲಿ ಈಗ ನೀರವ ಮೌನ ಆವರಿಸಿದೆ. ದ್ವಾರಕೀಶ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ತೀವ್ರ ಸಂತಾಪ ಸೂಚಿಸಿದ್ದು, ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರಿಗೆ ಅಧಿಸೂಚನೆ ಹೊರಡಿಸಿದೆ.

 

ಬೆಂಗಳೂರಿನ ಟಿ.ಆರ್.ಮಿಲ್ನಲ್ಲಿ ಅಂತ್ಯ ಸಂಸ್ಕಾರಕ್ಕೆ ತಯಾರಿ ನಡೆಸಲಾಗಿದ್ದು, ಸಾರ್ವಜನಿಕ, ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ದ್ವಾರಕೀಶ್ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಮಧ್ಯಾಹ್ನ 2 ಗಂಟೆ ನಂತರ ಚಾಮರಾಜಪೇಟೆಯಲ್ಲಿರುವ ಟಿ.ಆರ್.ಮಿಲ್​​ನ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ. ಹಿರಿಯ ಪುತ್ರ ಯೋಗೀಶ್ ವಿಧಿವಿಧಾನ ನೆರವೇರಿಸಲಿದ್ದಾರೆ.

ಇದನ್ನೂ ಓದಿ : ಯುಪಿಎಸ್​ಸಿ ಪರೀಕ್ಷೆಯಲ್ಲಿ ರಾಜ್ಯದ 25 ಮಂದಿಗೆ ರ್‍ಯಾಂಕ್​​ – ವಿಜಯಪುರದ ವಿಜೇತ ರಾಜ್ಯಕ್ಕೆ ಟಾಪರ್​​​​..!

Leave a Comment

DG Ad

RELATED LATEST NEWS

Top Headlines

ವಾಲ್ಮೀಕಿ ಹಗರಣ – ಸತ್ಯನಾರಾಯಣ ವರ್ಮಾ ಮನೆಯಲ್ಲಿದ್ದ 10 ಕೆ.ಜಿ‌ ಚಿನ್ನದ ಬಿಸ್ಕೆಟ್ SIT ವಶಕ್ಕೆ..!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಸಂಬಂಧ ತನಿಖೆಯನ್ನ SIT ಚುರುಕುಗೊಳಿಸಿದೆ. ಸತ್ಯನಾರಾಯಣ ವರ್ಮಾ ಮನೆಯಲ್ಲಿದ್ದ ಬರೋಬ್ಬರಿ 10 ಕೆ.ಜಿ‌ ಚಿನ್ನದ

Live Cricket

Add Your Heading Text Here