ಕೊಡಗು : ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಗ್ರಾಮದ ಚಾಮುಂಡಿಕೊಲ್ಲಿ ರಸ್ತೆಯಲ್ಲಿ ನಡೆಸಿದೆ. 50 ವರ್ಷದ ಅಯ್ಯಮಾಡ ಮಾದಯ್ಯ ಮೃತ ದುರ್ದೈವಿ.
ಅಯ್ಯಮಾಡ ಮಾದಯ್ಯ ಅವರು ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಗ್ರಾಮದ ಚಾಮುಂಡಿಕೊಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದಾಗ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಕಾಡಾನೆ ತುಳಿತಕ್ಕೆ ಅಯ್ಯಮಾಡ ಮಾದಯ್ಯ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಇನ್ನು ಗ್ರಾಮ ವ್ಯಾಪ್ತಿಯಲ್ಲೇ ಆನೆಗಳ ಹಿಂಡು ಅಡ್ಡಾಡುತ್ತಿರೋ ಕಾರಣದಿಂದ ಸ್ಥಳೀಯ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದಿದ್ದಾರೆ.
ಇದನ್ನೂ ಓದಿ : ಬಿಸಿಲ ಬೇಗೆಯ ಮಧ್ಯೆ ವರುಣ ಸಿಂಚನ – ರಾಜ್ಯದ ವಿವಿಧೆಡೆ ತಂಪೆರೆದ ಮಳೆರಾಯ..!
Post Views: 108