ಬೆಂಗಳೂರು : ಮುಡಾ ಹಗರಣ ಸಂಬಂಧ ಇಡಿ ಅಧಿಕಾರಿಗಳು ಎರಡನೇ ECIR ದಾಖಲಿಸಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ECIR ದಾಖಲಿಸಿಕೊಂಡಿದೆ. ಇದೀಗ ED 18 ಅಧಿಕಾರಿಗಳ ವಿರುದ್ಧ ECIR ದಾಖಲಿಸಿದೆ.
2022ರಲ್ಲಿ ಲೋಕಾಯುಕ್ತ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಅಧಿಕಾರಿಗಳ ವಿರುದ್ಧ ECIR ದಾಖಲಾಗಿದೆ. ಹಿನಕಲ್ ಸರ್ವೇ ನಂಬರ್ 89ರಲ್ಲಿ ಮುಡಾದಿಂದ ನಿವೇಶನ ಹಂಚಿಕೆಯಾಗಿತ್ತು.
350 ಕ್ಕೂ ಹೆಚ್ಚು ಪ್ರಭಾವಿಗಳಿಗೆ 7.18 ಎಕರೆ ಜಮೀನನ್ನು ಹಂಚಿಕೆ ಮಾಡಿದ ಆರೋಪ ಕೇಳಿ ಬಂದಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 18 ಅಧಿಕಾರಿಗಳ ವಿರುದ್ಧ ECIR ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಅಧಿಕಾರಿಗಳಿಗೆ ಲೋಕಾಯುಕ್ತ ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿತ್ತು.
ಇದನ್ನೂ ಓದಿ : ಕಾನ್ಪುರ ಸ್ಟೇಡಿಯಂನಲ್ಲಿ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ – ‘ಮಾಸ್ಟರ್ ಬ್ಲಾಸ್ಟರ್’ ರೆಕಾರ್ಡ್ ಬ್ರೇಕ್..!
Post Views: 37