ಬೆಂಗಳೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಬೆಳವಣಿಗಳು ನಡೆಯುತ್ತಿವೆ. 14 ಸೈಟ್ಗಳನ್ನು ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ವಾಪಸ್ ಮುಡಾಗೆ ಹಿಂದುರಿಗಿಸಿದ್ದಾರೆ. ಆದರೆ ಇದೀಗ ಮುಡಾ ಪ್ರಕರಣದ ತನಿಖೆಗೆ ED ಅಧಿಕೃತವಾಗಿ ಪ್ರವೇಶ ಮಾಡಿದ್ದು, ಸಿಎಂ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣಗೆ ಪ್ರಕರಣದ ಸಾಕ್ಷ್ಯಾಧಾರ, ದಾಖಲೆ ಸಲ್ಲಿಸುವಂತೆ ಸಮನ್ಸ್ ಜಾರಿ ಮಾಡಿದೆ.
ಅಕ್ಟೋಬರ್ 3ರ ಬೆಳಗ್ಗೆ ಮುಡಾ ಪ್ರಕರಣದ ಸಂಬಂಧಿಸಿದಂತೆ ಸಾಕ್ಷ್ಯಾಧಾರ, ದಾಖಲೆಯೊಂದಿಗೆ ವಿಚಾರಣೆಗೆ ಖುದ್ದು ಹಾಜರಾಗಲು ಸ್ನೇಹಮಯಿ ಕೃಷ್ಣಗೆ ED ಸಮನ್ಸ್ ನೀಡಿದೆ. ಈ ಮೂಲಕ ED ಅಧಿಕೃತವಾಗಿ ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದಂತಾಗಿದೆ.
ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ED, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಇಸಿಐಆರ್ ದಾಖಲಿಸಿಕೊಂಡಿದೆ. ಇದರ ಬೆನ್ನಲ್ಲೇ ಇದೀಗ ಸಾಕ್ಷ್ಯಾಧಾರ, ದಾಖಲೆ ಸಲ್ಲಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣಗೆ ಸಮನ್ಸ್ ನೀಡಿದೆ. ಸ್ನೇಹ ಮಯಿ ಕೃಷ್ಣ ನೀಡುವ ದಾಖಲೆ, ಮಾಹಿತಿ ಆಧರಿಸಿ ಬಳಿಕ ED ತನಿಖೆ ಆರಂಭಿಸಲಿದೆ.
ಇದನ್ನೂ ಓದಿ : ಬಾಗಲಕೋಟೆ : ಲಂಚ ಪಡೆಯುತ್ತಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಲೋಕಾ ಬಲೆಗೆ..!