ಬಳ್ಳಾರಿ : ಶಾಸಕ ನಾ.ರಾ ಭರತ್ ರೆಡ್ಡಿ ಮನೆ ಹಾಗೂ ಕಚೇರಿ ಮೇಲೆ ಶನಿವಾರದಂದು ಇ.ಡಿ ದಾಳಿ ನಡೆಸಿದ್ದು, ಇಂದು ಕೂಡ ಅಧಿಕಾರಿಗಳ ಪರಿಶೀಲನೆ ಮುಂದುವರಿದಿದೆ.
ನಿನ್ನೆ ಬೆಳಗ್ಗೆ 6:30ಕ್ಕೆ ಭರತ್ ರೆಡ್ಡಿ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ಮಾಡಿದ್ದರು. 24 ಗಂಟೆಗಳಾದರೂ ಇ.ಡಿ ಅಧಿಕಾರಿಗಳ ಪರಿಶೀಲನೆ ಮುಗಿಯಲೇ ಇಲ್ಲ. ದಿನವಿಡೀ ನಡೆದ ದಾಳಿಯಲ್ಲಿ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಕಲೆ ಹಾಕಿದ್ದಾರೆ. ಇಂದು ನಾ.ರಾ.ಭರತ್ ಆಪ್ತರ ಮನೆ ಮೇಲೆ ದಾಳಿ ನಡೆಸುವ ಸಾಧ್ಯತೆಯಿದೆ.
ಭರತ್ ಅವರ ಚಿಕ್ಕಪ್ಪ ಪ್ರತಾಪ್ ರೆಡ್ಡಿ, ಆಪ್ತರಾದ ರತ್ನ ಬಾಬು ಮತ್ತು ಸತೀಶ್ ರೆಡ್ಡಿ ಮನೆಗಳಲ್ಲೂ ಶೋಧ ಕಾರ್ಯ ನಡೆಸಿದ್ದಾರೆ. ಇಂದು ಇನ್ನಷ್ಟು ಆಪ್ತರು ಮತ್ತು ಸಂಬಂಧಿಗಳ ಮನೆ ಮೇಲೆ ದಾಳಿ ನಡೆಸುವ ಸಾಧ್ಯತೆಗಳಿವೆ.
ಅದಾಯಕ್ಕಿಂತಲೂ ಅಧಿಕ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಇ.ಡಿ ದಾಳಿ ನಡೆಸಿದೆ. ಭರತ್ ರೆಡ್ಡಿ ಪ್ರಭಾವಿ ರಾಜಕಾರಣಿ ಸೂರ್ಯನಾರಾಯಣ ರೆಡ್ಡಿ ಪುತ್ರನಾಗಿದ್ದು, ಸುಮಾರು ವರ್ಷಗಳಿಂದ ಗ್ರಾನೈಟ್ ಉದ್ಯಮ ಮಾಡಿಕೊಂಡು ಬಂದಿದ್ದು, ನೂರಾರು ಕೋಟಿ ಆಸ್ತಿ ಹೊಂದಿದ್ದಾರೆ.
ಇದನ್ನೂ ಓದಿ : ಅಮೃತಹಳ್ಳಿ ಠಾಣೆ ಮೇಲೆ ಮಾನವ ಹಕ್ಕು ಆಯೋಗ ದಾಳಿ ಕೇಸ್ : ಪೊಲೀಸ್ ಇನ್ಸ್ಪೆಕ್ಟರ್ ಅಂಬರೀಶ್ಗೆ ನೋಟಿಸ್ ಜಾರಿ..!