ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ಹೊತ್ತಲ್ಲೇ ಮುಡಾ ಕಚೇರಿ ಮೇಲೆ ED ಅಧಿಕಾರಿಗಳು ದಾಳಿ ನಡೆಸಿದ್ದಾರೆ. 20ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಇದೀಗ ಬೆಂಗಳೂರಲ್ಲಿ ED ರೇಡ್ಗೆ ಅಸಮಾಧಾನ ಹೊರಹಾಕಿದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು, ಇಲ್ಲಿ ಯಾವುದೇ ಹಣಕಾಸಿನ ವ್ಯವಹಾರ ನಡೆದಿಲ್ಲ. ED ದಾಳಿ ಮಾಡುವ ಅಗತ್ಯ ಇರಲಿಲ್ಲ ಎಂದಿದ್ದಾರೆ.
ಇನ್ನು ಕುಮಾರಸ್ವಾಮಿ ಕೇಂದ್ರ ಮಂತ್ರಿಯಾಗಿ ಇದೆಲ್ಲಾ ಆಗ್ತಿದೆ. ರಾಜಕೀಯ ಕಾರಣಕ್ಕಾಗಿ ಇದೆಲ್ಲಾ ಮಾಡಲಾಗುತ್ತಿದೆ. ಬೇರೆ ಪ್ರಕರಣಗಳ ಬಗ್ಗೆ ಇಲ್ಲದ ಆತುರ ಇದಕ್ಕೇಕೆ? ED ತನಿಖೆ ಪಾರದರ್ಶಕವಾಗಿರಬೇಕು ಎಂದು ED ರೇಡ್ ಬಗ್ಗೆ ಡಿ.ಕೆ.ಸುರೇಶ್ ರಿಯಾಕ್ಟ್ ಮಾಡಿದ್ದಾರೆ.
ಇದನ್ನೂ ಓದಿ : ನೀವು ಜೀವಂತವಾಗಿ ಇರ್ಬೇಕಾ.. 5 ಕೋಟಿ ನೀಡಿ – ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ..!
Post Views: 79