Download Our App

Follow us

Home » ಸಿನಿಮಾ » ‘ಈ ಪಾದ ಪುಣ್ಯಪಾದ’ ಚಿತ್ರದ ಮೊದಲ ಪೋಸ್ಟರ್ ರಿಲೀಸ್​​ – ಚಿತ್ರತಂಡಕ್ಕೆ ಶ್ರೀಮುರಳಿ ಸಾಥ್​​..!

‘ಈ ಪಾದ ಪುಣ್ಯಪಾದ’ ಚಿತ್ರದ ಮೊದಲ ಪೋಸ್ಟರ್ ರಿಲೀಸ್​​ – ಚಿತ್ರತಂಡಕ್ಕೆ ಶ್ರೀಮುರಳಿ ಸಾಥ್​​..!

‘ದಾರಿ ಯಾವುದಯ್ಯಾ ವೈಕುಂಠಕ್ಕೆ’ ಚಿತ್ರ ನಿರ್ದೇಶಕರಾದ ಸಿದ್ದು ಪೂರ್ಣಚಂದ್ರರವರ ಮತ್ತೊಂದು ಚಿತ್ರ ‘ಈ ಪಾದ ಪುಣ್ಯಪಾದ’. ಇತ್ತೀಚಿಗೆ ಈ ಚಿತ್ರದ ಮೊದಲ ಪೋಸ್ಟರ್​​ರನ್ನು ರೋರಿಂಗ್ ಸ್ಟಾರ್ ಶ್ರೀ ಮುರಳಿ ಅವರು ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.

ಇದೊಂದು ಆನೆ ಕಾಲು ರೋಗಿಯ ಕಥೆಯಾಧಾರಿತ ಚಿತ್ರವಾಗಿರುವುದರಿಂದ ಪ್ರತಿಯೊಬ್ಬ ಪ್ರೇಕ್ಷಕನಿಗೂ ಕೂಡ ಹೊಸ ಆಯಾಮದಲ್ಲಿ ಈ ಚಿತ್ರ ಪರಿಣಾಮ ಬೀರಬಹುದು ಎಂಬುದು ನಿರ್ದೇಶಕರ ಆಶಯ. ಪ್ರತಿಯೊಬ್ಬ ಮನುಷ್ಯನಿಗೂ ಒಂದಲ್ಲ ಒಂದು ರೀತಿಯ ಖಾಯಿಲೆಗಳು ಸಂಭವಿಸಿದಾಗ ಆ ರೋಗಕ್ಕಿಂತ ಮಾನಸಿಕವಾಗಿಯೇ ಯಾತನೆ ಪಡುವುದು ಜಾಸ್ತಿ ಆಗಿರುತ್ತದೆ. ಯಾವುದೇ ರೋಗ ಬಂದರೂ ಕೂಡ ನಾವು ಎದೆಗುಂದದೆ ತಾಳ್ಮೆಯಿಂದ ಅದನ್ನು ಎದುರಿಸಬೇಕು ಎಂಬುದೇ ಈ ಚಿತ್ರದ ಕಥೆಯಾಗಿದೆ.

ಈ ಕಥೆಯನ್ನು ಹಲವು ವರ್ಷಗಳಿಂದ ಅಧ್ಯಯನ ಮಾಡಿ ಒಂದು ಚಿತ್ರಕಥೆಯ ರೂಪು ರೇಷೆಗಳನ್ನು ಸಿದ್ಧಪಡಿಸಿ ಆನಂತರ ಇದನ್ನು ಚಿತ್ರವಾಗಿಸಿದ್ದಾರೆ. ಯಾವುದೇ ರೋಗ ಬಂದಿರುವ ವ್ಯಕ್ತಿಯನ್ನು ಯಾವ ರೀತಿ ಪ್ರೀತಿಯಿಂದ ನೋಡಿಕೊಳ್ಳಬೇಕು, ಸಾಂತ್ವನ ಹೇಳಬೇಕು ಎಂಬುದು ಈ ಚಿತ್ರದ ಮುಖಾಂತರ ಕಾಣಿಸುತ್ತದೆ. ಜೊತೆಗೆ ಸಾಮಾಜಿಕ ಪರಿಣಾಮ ಬೀರುವಂತಹ ಚಿತ್ರಗಳು ಇತ್ತೀಚೆಗೆ ಕಡಿಮೆಯಾಗಿರುವುದರಿಂದ ಇಂತಹ ಚಿತ್ರಕ್ಕೆ ಪ್ರೋತ್ಸಾಹ ಕೊಡಬೇಕೆಂಬುದು ಇಡೀ ಚಿತ್ರತಂಡದ ಆಶಯ ಆಗಿದೆ.ಆ ಕಾರಣಕ್ಕಾಗಿಯೇ ಶ್ರೀಮುರಳಿ ಅವರು ಈ ನಿಟ್ಟಿನಲ್ಲಾದರೂ ಹೊಸಬರಿಗೆ ಪ್ರೋತ್ಸಾಹ ನೀಡಬೇಕು ಹೊಸಬರಿಗೆ ದಾರಿಯಾಗಬೇಕು ಹಾಗಾಗಿ ನಾನು ಈ ಚಿತ್ರದ ಪೋಸ್ಟರ್ ಅನ್ನು ಬಿಡುಗಡೆಗೊಳಿಸುತ್ತಾ ಇದ್ದೀನಿ. ನೀವು ಕೂಡ ಈ ಚಿತ್ರವನ್ನು ನೋಡಬೇಕು ಅನ್ನುವ ಅವರ ಮನದಾಳದ ಮಾತುಗಳನ್ನು ಹಂಚಿಕೊಂಡರು.

ಈ ಚಿತ್ರಕ್ಕೆ ನಾಯಕ ನಟರಾಗಿ ಆಟೋ ನಾಗರಾಜ್​ರವರು ಈ ಪಾತ್ರವನ್ನು ನಿಭಾಯಿಸಿದ್ದಾರೆ. ಈ ಹಿಂದೆ ಅವರು ಆಟೋ ಪ್ರಮೋಷನ್​ ಅನ್ನು ಕಳೆದ 18 ವರ್ಷಗಳಿಂದಲೂ ಮಾಡಿದಂತವರು, ಅವರು ಮೊದಲ ಬಾರಿಗೆ ನಾಯಕ ನಟರಾಗಿ ಈ ಪಾತ್ರವನ್ನು ನಿರ್ವಹಿಸಿದ್ದಾರೆ. ನಂತರ ರಶ್ಮಿ, ಚೈತ್ರ, ಪ್ರಮೀಳಾ ಸುಬ್ರಹ್ಮಣ್ಯ, ಮನೋಜ್, ಹರೀಶ್ ಕುಂದೂರು, ಬೇಬಿ ರಿದಿ, ಪವಿತ್ರ, ಬಾಲರಾಜ್ ವಾಡಿ, ರೋಹಿಣಿ, ಶಂಕರ್ ಭಟ್, ಪ್ರೀತಿ, ಮೀಸೆ ಮೂರ್ತಿ ಇನ್ನೂ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಈ ಚಿತ್ರಕ್ಕೆ ಸಂಗೀತ ಮತ್ತು ಹಿನ್ನೆಲೆ ಸಂಗೀತವನ್ನು ಅನಂತ ಆರ್ಯನ್ ರವರು ನೀಡಿದ್ದಾರೆ. ಕಲೆ ಬಸವರಾಜ್ ಆಚಾರ್, ವಸ್ತ್ರಲಂಕಾರ ನಾಗರತ್ನ ಕೆ ಎಚ್, ಶಬ್ದ ವಿನ್ಯಾಸ ಶ್ರೀರಾಮ್, ಕಲರಿಂಗ್ ಗಗನ್ ಆರ್, ಸಂಕಲನ ದೀಪು ಸಿ ಎಸ್ ನಿರ್ವಹಿಸಿದ್ದಾರೆ. ಈ ಚಿತ್ರ ಈಗಾಗಲೇ ಸೆನ್ಸಾರ್ ಮಂಡಳಿಯಿಂದ ಯು ಸರ್ಟಿಫಿಕೇಟ್ ಪಡೆದಿದೆ. ಈ ಚಿತ್ರವು ಹಲವಾರು ಚಲನಚಿತ್ರೋತ್ಸವಗಳಿಗೆ ಸ್ಪರ್ಧಿಸಲು ರೆಡಿಯಾಗಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ : ಬಹುನಿರೀಕ್ಷಿತ ’45’ ಚಿತ್ರಕ್ಕೆ ಹಾಲಿವುಡ್​ನ ಹೆಸರಾಂತ ತಂತ್ರಜ್ಞರಿಂದ ವಿ.ಎಫ್.ಎಕ್ಸ್..!

Leave a Comment

DG Ad

RELATED LATEST NEWS

Top Headlines

“ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಸಿನಿಮಾದ 2ನೇ ಹಾಡು ರಿಲೀಸ್ – ಚಿತ್ರತಂಡಕ್ಕೆ ಗೋವಾ ಸಿಎಂ ಸಾಥ್..!

“ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಲನಚಿತ್ರದ ಎರಡನೇ ಮರಾಠಿ ಲಿರಿಕಲ್‌ ವಿಡಿಯೋ ಜನವರಿ 14ರಂದು ಗೋವಾ ಮುಖ್ಯಮಂತ್ರಿಗಳ ನಿವಾಸದಲ್ಲಿ ಬಿಡುಗಡೆಯಾಗಿದೆ. ಗೋವಾದ ಸಿಎಂ ಪ್ರಮೋದ ಸಾವಂತ್

Live Cricket

Add Your Heading Text Here