ಬೆಂಗಳೂರು : ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ಭಾರೀ ಮಳೆ ಸುರಿಯುತ್ತಿದೆ. ಇನ್ನು ಹಲವೆಡೆ ಶೀತ ವಾತಾವರಣವಿದ್ದು, ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಚುಮು ಚುಮು ಚಳಿ ಶುರುವಾಗಿದೆ.
ಉದ್ಯಾನ ನಗರಿದಲ್ಲಿ ಊಟಿ ವಾತವರಣ ನಿರ್ಮಾಣವಾಗಿದ್ದು, ಕನಿಷ್ಠ ಉಷ್ಣಾಂಷ 19ರಿಂದ 20 ಡಿಗ್ರಿ ಸೆಲ್ಸಿಯಸ್ ವರೆಗೂ ತಲುಪಿದೆ. ಇನ್ನು ಇಂದು ಮತ್ತೆ ನಾಳೆ ರಾಜ್ಯ ರಾಜಧಾನಿ ಸೇರಿದಂತೆ ಹಲವು ಸೇರಿ ಬಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಫೆಂಗಲ್ ಚಂಡಮಾರುತದ ಪರಿಣಾಮ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಅವಾಂತರಗಳೇ ಸೃಷ್ಟಿಯಾಗಿದ್ದು, ಮುಂಜಾಗ್ರಾತಾ ಕ್ರಮವಾಗಿ ಇಂದು ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ ಹಾಗೂ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ : ವಿಧಾನಸೌಧದ ಅಂಗಳಕ್ಕೆ ED ನೋಟಿಸ್ – ಸಚಿವ ಭೈರತಿ ಸುರೇಶ್ ಬುಡಕ್ಕೂ ಬರುತ್ತಾ ಮುಡಾ ಸಂಕಷ್ಟ?