Download Our App

Follow us

Home » ರಾಜಕೀಯ » ಅಂದು ಕೊಡಗಿನಲ್ಲಿ ಮೊಟ್ಟೆ, ಇಂದು ಸಿದ್ದುಗೆ ಹೂಮಳೆ ಸ್ವಾಗತ..!

ಅಂದು ಕೊಡಗಿನಲ್ಲಿ ಮೊಟ್ಟೆ, ಇಂದು ಸಿದ್ದುಗೆ ಹೂಮಳೆ ಸ್ವಾಗತ..!

ಮಡಿಕೇರಿ : ಕೊಡಗು ಜಿಲ್ಲೆಗೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಗುರುವಾರ ಕಾರ್ಯಕರ್ತರು ವಿರಾಜಪೇಟೆಯ ಪಂಜರಪೇಟೆಯಲ್ಲಿ ಹೂಮಳೆಗರೆದಿದ್ದಾರೆ.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ಜೆಸಿಬಿ ವಾಹನದ ಮೇಲೆ ನಿಂತು ಹೂವಿನ ದಳಗಳನ್ನು ಹಾಕಿ ಸ್ವಾಗತಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಹರ್ಷ ವ್ಯಕ್ತಪಡಿಸಿದ ಸಿದ್ದರಾಮಯ್ಯ ‘ವಿರೋಧ ಪಕ್ಷದ ನಾಯಕನಾಗಿ ಕೊಡಗಿಗೆ ಬಂದಿದ್ದಾಗ ಕೆಲವು ಕಿಡಿಗೇಡಿಗಳು ನನ್ನ ಮೇಲೆ ಮೊಟ್ಟೆ ಎಸೆದಿದ್ದರು. ಮುಖ್ಯಮಂತ್ರಿಯಾಗಿ ಇಂದು ಬಂದಾಗ ಕೊಡಗಿನ‌ ಸಮಸ್ತ ಸಜ್ಜನ ಜನಸಮೂಹ ಪ್ರೀತಿಯ ಹೂಮಳೆಯಲ್ಲಿ ನನ್ನನ್ನು ಮುಳುಗಿಸಿದೆ. ಇದು ಕೊಡಗಿನ ಸಜ್ಜನರ ಗೆಲುವು, ಇದೇ ಪ್ರಜಾಪ್ರಭುತ್ವದ ಸೌಂದರ್ಯ ಎಂದು ಹೇಳಿದ್ದಾರೆ.

ಕಳೆದ ಬಾರಿ ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಕೊಡಗಿಗೆ ಬಂದಿದ್ದಾಗ ಏನಾಗಿತ್ತು? ಒಂದೂವರೆ ವರ್ಷದ ಹಿಂದೆ ಪ್ರಕೃತಿ ವಿಕೋಪ ಹಾನಿ ಪರಿಶೀಲಿಸಲು ಕೊಡಗಿಗೆ ಪ್ರತಿಪಕ್ಷ ನಾಯಕರಾಗಿ ಆಗಮಿಸಿದ್ದ ಸಿದ್ದರಾಮಯ್ಯ ಅವರ ತೆರಳುತ್ತಿದ್ದ ಕಾರಿಗೆ ಮೊಟ್ಟೆ ಎಸೆಯುವ ಮೂಲಕ ಅಪಮಾನ ಮಾಡಲಾಗಿತ್ತು. ಟಿಪ್ಪು ಜಯಂತಿ ಆಚರಣೆಗೆ ಅವಕಾಶ ಮಾಡಿಕೊಟ್ಟಿದ್ದಾರೆಂಬ ಕಾರಣಕ್ಕಾಗಿ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆದಿತ್ತು.

ಮಡಿಕೇರಿ, ಗುಡ್ಡೆಹೊಸೂರಿನಲ್ಲಿ ಸಿದ್ದರಾಮಯ್ಯ ಅವರು ತೆರಳುತ್ತಿದ್ದ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ತಿತಿಮತಿಯಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪುಬಾವುಟ ಪ್ರದರ್ಶಿಸಿದರು. ಸೋಮವಾರಪೇಟೆ, ಕೊಡ್ಲಿಪೇಟೆ ಭಾಗದಲ್ಲಿಯೂ ಸಿಎಂ ತೆರಳುತ್ತಿದ್ದ ವಾಹನದ ಮೇಲೆ ದಾಳಿ ನಡೆದಿತ್ತು. ಕೊಡಗು ಪೊಲೀಸರ ವೈಫಲ್ಯಕ್ಕೆ ಸ್ವತಃ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಶಾಶ್ವತವಾಗಿ ಅಧಿಕಾರದಲ್ಲಿ ಇರುವುದಿಲ್ಲ. 6 ತಿಂಗಳ ಬಳಿಕ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಕಿಡಿಕಾರಿದ್ದರು.

ಇದನ್ನೂ ಓದಿ : ಶೆಟ್ಟರ್​​ ಬೆನ್ನಲ್ಲೇ ಲಕ್ಷ್ಮಣ ಸವದಿ ಬಿಜೆಪಿ ಸೇರ್ತಾರಾ..?

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆ ಸಾ*ವು..!

ಉಡುಪಿ : 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶವಿದೆ. ಹಾಗಾಗಿ ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಪಿ.ಯಶೋಧಾ ನಾರಾಯಣ ಉಪಾಧ್ಯ

Live Cricket

Add Your Heading Text Here