ರಾಮನಗರ: ಚನ್ನಪಟ್ಟಣ ಉಪಚುನಾವಣೆಯ ‘ಮೈತ್ರಿ’ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಇಂದು ರೋಡ್ ಶೋ ಮೂಲಕ ತೆರಳಿ ನಾಮಿನೇಷನ್ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ.
BBA ಪದವೀಧರನಾಗಿರುವ ನಿಖಿಲ್ ಬರೋಬ್ಬರಿ 113 ಕೋಟಿ ಆಸ್ತಿ ಒಡೆಯ. ಒಟ್ಟು 78.15 ಕೋಟಿ ಮೌಲ್ಯದ ಚರಾಸ್ತಿ, 29.34ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ರೇವತಿ ನಿಖಿಲ್ ಹೆಸರಲ್ಲಿ 5.49ಕೋಟಿ ಮೌಲ್ಯದ ಚರಾಸ್ತಿ, 43 ಲಕ್ಷ ಮೌಲ್ಯದ ಸ್ಥಿರಾಸ್ತಿ ಇದೆ. ಮಗ ಆವ್ಯಾನ್ ದೇವ್ ಹೆಸರಲ್ಲಿ 11 ಲಕ್ಷ ಹಣ ಇದೆ.
ನಿಖಿಲ್ ಕುಮಾರಸ್ವಾಮಿ ಹೆಸರಲ್ಲಿ 1.488 ಕೆಜಿ ಚಿನ್ನ, 16 ಕೆಜಿ ಬೆಳ್ಳಿ ಹಾಗೂ ರೇವತಿ ಹೆಸರಲ್ಲಿ 1.411 ಕೆಜಿ ಚಿನ್ನ, 33.05 ಕೆಜಿ ಬೆಳ್ಳಿ, 13 ಕ್ಯಾರೆಟ್ ಡೈಮಂಡ್ ಇದೆ. 5 ಐಷಾರಾಮಿ ವಾಹನಗಳ ಒಡೆಯರಾಗಿರೋ ನಿಖಿಲ್ ಕುಮಾರಸ್ವಾಮಿ ಬಳಿ 1 ಇನ್ನೋವಾ ಐ ಕ್ರಾಸ್, 1 ರೇಂಜ್ ರೋವರ್ ಹಾಗೂ ಎರಡು ಕ್ಯಾರಾವ್ಯಾನ್, 1 ಇನ್ನೋವಾ ಕ್ರಿಸ್ಟ ಕಾರು ಇದೆ.
ಇನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಪುತ್ರ ನಿಖಿಲ್ ಹೆಸರಲ್ಲಿ ಒಟ್ಟು 70.44 ಕೋಟಿ ಸಾಲ ಇದೆ. ರೇವತಿ ಹೆಸರಲ್ಲಿ 4.96 ಕೋಟಿ ಸಾಲ ಇದೆ.
ಇದನ್ನೂ ಓದಿ : ಯಶಸ್ವಿಯಾಗಿ 75 ದಿನ ಪೂರೈಸಿದ ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ..!