Download Our App

Follow us

Home » ರಾಜಕೀಯ » ಚುನಾವಣಾ ಬಾಂಡ್​ಗಳ ಮೂಲಕ ಸುಲಿಗೆ ಆರೋಪ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ವಿರುದ್ಧ FIR​ ದಾಖಲಿಸಲು ಕೋರ್ಟ್​ ಆದೇಶ..!

ಚುನಾವಣಾ ಬಾಂಡ್​ಗಳ ಮೂಲಕ ಸುಲಿಗೆ ಆರೋಪ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ವಿರುದ್ಧ FIR​ ದಾಖಲಿಸಲು ಕೋರ್ಟ್​ ಆದೇಶ..!

ಬೆಂಗಳೂರು : ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿರುವ ಆರೋಪಕ್ಕಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ನೀಡಿದೆ.

ಚುನಾವಣಾ ಬಾಂಡ್‌ಗಳ ಮೂಲಕ ಹೆದರಿಸಿ ಸುಲಿಗೆ ಮಾಡಲಾಗಿದೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್‌ಪಿ)ನ ಆದರ್ಶ ಅಯ್ಯರ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕ್ರಮ ಕೈಗೊಳುವಂತೆ ದೂರು ಸಲ್ಲಿಸಿದ್ದರು.

ಈ ದೂರನ್ನು ವಿಚಾರಣೆಗೆ ಪರಿಗಣಿಸಿರುವ ನ್ಯಾಯಾಲಯವು, ಉದ್ಯಮ ಸಂಸ್ಥೆಗಳಿಂದ ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ್ದಾರೆನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ತಿಲಕ್ ನಗರ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಸೂಚಿಸಿದೆ.

42ನೇ ಎಸಿಎಂಎಂ ನ್ಯಾಯಾಲಯಕ್ಕೆ ಜನಾಧಿಕಾರ ಸಂಘರ್ಷ ಪರಿಷತ್ ಕಳೆದ ಏಪ್ರಿಲ್ ನಲ್ಲಿ ಸಲ್ಲಿಸಲಾಗಿದ್ದ ದೂರಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಇಡಿ ಅಧಿಕಾರಿಗಳು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಬಿಜೆಪಿ ರಾಷ್ಟ್ರೀಯ ನಾಯಕರು, ಆಗಿನ ಬಿಜೆಪಿ ಕರ್ನಾಟಕ ಅಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್, ಬಿ ವೈ ವಿಜಯೇಂದ್ರ, ಇವರ ಮೇಲೆ ದೂರು ನೀಡಿದ್ದರು.

ಈ ದೂರನ್ನು ಪರಿಗಣಿಸಿರುವ ನ್ಯಾಯಾಲಯವು ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ತಿಲಕ್ ನಗರ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಪ್ರಕರಣದ ವಿಚಾರಣೆಯನ್ನ ಅಕ್ಟೋಬರ್ 10ಕ್ಕೆ ಮುಂದೂಡಲಾಗಿದೆ. ಕೋರ್ಟ್ ಆದೇಶವನ್ನು ಅಸ್ತ್ರ ಮಾಡಿಕೊಂಡ ಕಾಂಗ್ರೆಸ್​ ನಾಯಕರು, ನಿರ್ಮಲಾ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದಿದ್ದಾರೆ.

ಇದನ್ನೂ ಓದಿ : ಮುಡಾ ಕೇಸ್ : ಸಿಎಂ ಸಿದ್ದು ರಾಜಕೀಯ ಜೀವನದಲ್ಲೇ ಮೊದಲ FIR – ಅಧಿಕೃತವಾಗಿ ತನಿಖೆ ಆರಂಭಿಸಿದ ಲೋಕಾ..!

Leave a Comment

DG Ad

RELATED LATEST NEWS

Top Headlines

ಸಲ್ಮಾನ್ ಖಾನ್​ ರಕ್ಷಣೆಗೆ 70 ಜನರ ನೇಮಕ.. 4 ಲೇಯರ್​ ಭದ್ರತೆ, ಸರ್ಕಾರ ಖರ್ಚು ಮಾಡೋದೆಷ್ಟು ಗೊತ್ತಾ?

ಹೈದರಾಬಾದ್‌ : ಬಾಲಿವುಡ್ ಸೂಪರ್‌ಸ್ಟಾರ್, ಭಾಯಿಜಾನ್ ಸಲ್ಮಾನ್ ಖಾನ್ ಮುಂಬರುವ ಆಕ್ಷನ್ ಡ್ರಾಮಾ ಸಿನಿಮಾ ‘ಸಿಕಂದರ್‌’ನ ಸಿನಿಮಾದ ಚಿತ್ರೀಕರಣವನ್ನು ಹೆಚ್ಚಿನ ಭದ್ರತಾ ಕ್ರಮಗಳ ಮಧ್ಯೆ ಶುರು ಮಾಡಿಕೊಂಡಿದ್ದಾರೆ.

Live Cricket

Add Your Heading Text Here