Download Our App

Follow us

Home » ರಾಜಕೀಯ » ಲೋಕಸಭಾ ಚುನಾವಣೆ : ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ..!

ಲೋಕಸಭಾ ಚುನಾವಣೆ : ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ..!

ಬೆಂಗಳೂರು : ಲೋಕಸಭಾ ಚುನಾವಣೆಯ ಕಣ ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ವೇಳೆ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಯಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲು ಭರ್ಜರಿ ತಯಾರಿ ನಡೆಸುತ್ತಿದೆ. ಇದರ ನಡುವೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ಎರಡು ಜಿಲ್ಲೆಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಗೆಲುವಿಗೆ ರಣತಂತ್ರ ರೂಪಿಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಇಂದಿನಿಂದ ಮೂರು ದಿನ ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಎರಡು ಜಿಲ್ಲೆಗಳನ್ನು ಲೋಕಸಭಾ ಎಲೆಕ್ಷನ್​ನಲ್ಲಿ ಗೆಲ್ಲಿಸಲು ಸತತವಾಗಿ ಸಿಎಂ ಸಿದ್ದರಾಮಯ್ಯ ಕಸರತ್ತು ನಡೆಸುತ್ತಿದ್ದಾರೆ. ಮೂರು ದಿನ ಎರಡು ಜಿಲ್ಲೆಯಲ್ಲಿ ಅಭ್ಯರ್ಥಿಗಳ ಪರ ಪ್ರಚಾರ ಹಾಗೂ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

 

ಇಂದು ಬೆಳಗ್ಗೆ 10.15ಕ್ಕೆ ಹೆಚ್‌ಎಎಲ್ ನಿಂದ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಸಿಎಂ ಪ್ರಯಾಣ ಬೆಳೆಸಲಿದ್ದು, 11 ಗಂಟೆಗೆ ವರುಣಾ ಕ್ಷೇತ್ರದ ಬಿಳಿಗೆರೆಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಬಳಿಕ 3 ಗಂಟೆಗೆ ತಿ. ನರಸೀಪುರದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿಯಾಗಿ, ಸಂಜೆ 6 ಗಂಟೆಗೆ ಮೈಸೂರಿನಲ್ಲಿ ಪೂಜ್ಯ ಬಿಷಪ್ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಇಂದು ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಗ್ಗೆ 10 ಗಂಟೆಗೆ ಶಂಕರಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ 11 ಗಂಟೆ ಚಾಮರಾಜದ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದು ಭಾಗಿಯಗಿ, 3 ಗಂಟೆಗೆ ಮೈಸೂರಿನಲ್ಲಿ ನಡೆಯುವ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸಿಎಂ ಸಂಜೆ 4 ಗಂಟೆಗೆ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಸಭೆ ನಡೆಸಲಿದ್ದು, ನಾಳೆಯೂ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಬುಧವಾರ ಬೆಳಗ್ಗೆ 9.30ಕ್ಕೆ ಸುತ್ತೂರು ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಬಳಿಕ 11 ಗಂಟೆಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಿ, ಮಧ್ಯಾಹ್ನ 1 ಗಂಟೆಗೆ ಮೈಸೂರು-ಮಡಿಕೇರಿ ಕ್ಷೇತ್ರದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಬುಧವಾರ ರಾತ್ರಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ  ವಾಪಸ್ ಆಗಲಿದ್ದಾರೆ.

ಇದನ್ನೂ ಓದಿ : ಪಕ್ಷೇತರವಾಗಿ ಸ್ಪರ್ಧಿಸಲು ಹೊರಟ ಸುಮಲತಾಗೆ ಬಿಗ್​ ಶಾಕ್​​ : ಕುಮಾರಸ್ವಾಮಿ ಪರ ಪ್ರಚಾರಕ್ಕಿಳಿದ ಇಂಡವಾಳು ಸಚ್ಚಿದಾನಂದ..!

Leave a Comment

DG Ad

RELATED LATEST NEWS

Top Headlines

ಚಿತ್ರದುರ್ಗದಲ್ಲಿ ಖಾಸಗಿ ಬಸ್ಸನ್ನೇ ಕದ್ದು ಎಸ್ಕೇಪ್ ಆಗಿರೋ ಖತರ್ನಾಕ್ ಕಳ್ಳರು..!

ಚಿತ್ರದುರ್ಗ : ಖಾಸಗಿ ಬಸ್​​ವೊಂದನ್ನು ಕದ್ದು ಕಳ್ಳರು ಎಸ್ಕೇಪ್ ಆಗಿರುವ ಘಟನೆ ಚಿತ್ರದುರ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ. ನಾಯಕನಹಟ್ಟಿ ಮೂಲದ SRE ಬಸ್ ಮಾಲೀಕ ಸಯ್ಯದ್

Live Cricket

Add Your Heading Text Here