Download Our App

Follow us

Home » ಅಪರಾಧ » ಎಲೆಕ್ಷನ್ ಹೊತ್ತಲ್ಲಿ ಪತ್ತೆಯಾದ ಕೋಟಿ, ಕೋಟಿ ಗೋಲ್ಡ್ : 15 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ..!

ಎಲೆಕ್ಷನ್ ಹೊತ್ತಲ್ಲಿ ಪತ್ತೆಯಾದ ಕೋಟಿ, ಕೋಟಿ ಗೋಲ್ಡ್ : 15 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ..!

ತಮಿಳುನಾಡು : ಲೋಕಸಭೆ ಚುನಾವಣೆಗೆ  ದಿನಾಂಕ ಘೋಷಣೆ ಹಿನ್ನೆಲೆ ಇಡೀ ದೇಶಾದ್ಯಂತ ನೀತೆ ಸಂಹಿತೆ ಜಾರಿಯಾಗಿದ್ದು, ಅಲ್ಲಲ್ಲಿ ಚೆಕ್​ಪೋಸ್ಟ್​ಗಳನ್ನು ಹಾಕಿರುವ ಪೊಲೀಸರು ಮತ್ತು ಚುನಾವಣಾಧಿಕಾರಿಗಳು, ಚುನಾವಣಾ ಅಕ್ರಮಗಳನ್ನು ತಡೆಯಲು ಹದ್ದಿನ ಕಣ್ಣಿಟ್ಟಿದ್ದಾರೆ.

ಈಗಾಗಲೇ ಕಳೆದ 20 ದಿನದಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟಿ ಕೋಟಿ ಹಣ, ಮದ್ಯ, ಚಿನ್ನಾಭರಣ ಸೀಜ್​ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ತಮಿಳುನಾಡಿನ ಹೊಸೂರು ಬಳಿಯ ಜೂಜುವಾಡಿನಲ್ಲಿ ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 15 ಕೋಟಿ ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿದೆ.

ತಮಿಳುನಾಡಿನ ಹೊಸೂರು ಬಳಿಯ ಜೂಜುವಾಡಿನಲ್ಲಿ ಸೂಕ್ತ ದಾಖಲೆ ಇಲ್ಲದೇ ಚಿನ್ನಾಭರಣ ಸಾಗಿಸಲಾಗುತಿತ್ತು. ಈ ವೇಳೆ ಚುನಾವಣಾ ಅಕ್ರಮಗಳನ್ನು ತಡೆಯಲು ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ಚೆಕ್​ಪೋಸ್ಟ್​ನಲ್ಲಿ​ ತಪಾಸಣೆ ಮಾಡುತ್ತಿದ್ದಾರೆ.

ಈ ಸಂದರ್ಭ 45 ಪೆಟ್ಟಿಗೆಗಳಲ್ಲಿ ಸಾಗಿಸಲಾಗುತ್ತಿದ್ದ ಚಿನ್ನಾಭರಣವನ್ನು ಸೀಜ್ ಮಾಡಿ ಫ್ಲೈಯಿಂಗ್ ಸ್ಕ್ವಾಡ್ ಪರಿಶೀಲನೆ ಮಾಡಿದ್ದಾರೆ. ಅರ್ಧದಷ್ಟು ಚಿನ್ನಾಭರಣಕ್ಕೆ ದಾಖಲೆಗಳೇ ಇಲ್ಲದ ಕಾರಣ ಚುನಾವಣಾಧಿಕಾರಿ ಪ್ರಿಯಾಂಕ ಅವರು ಪೂರ್ತಿ ಚಿನ್ನಾಭರಣವನ್ನು ಸೀಜ್ ಮಾಡಿದ್ದಾರೆ.

ಇದನ್ನೂ ಓದಿ : ಆನೇಕಲ್ : ಮೆರವಣಿಗೆ ಹೊತ್ತಲ್ಲೇ ನಿಯಂತ್ರಣ ತಪ್ಪಿ ನೆಲಕ್ಕುರುಳಿದ 120 ಅಡಿ ಎತ್ತರದ ರಥ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here