ನವದೆಹಲಿ : ಚುನಾವಣೆ ಆಯೋಗವು ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ವೇಳಾಪಟ್ಟಿಯನ್ನು ಇಂದು ಘೋಷಣೆ ಮಾಡುವ ಸಾದ್ಯತೆಯಿದೆ. ಕೇಂದ್ರ ಚುನಾವಣಾ ಆಯೋಗ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದೆ.
ಈ ವೇಳೆ ಜಮ್ಮು-ಕಾಶ್ಮೀರ, ಹರಿಯಾಣ, ಜಾರ್ಖಂಡ್ಕ್ಕೆ ದಿನಾಂಕ ಘೋಷಣೆ ಸಾಧ್ಯತೆಯಿದ್ದು, ಇದರೊಂದಿಗೆ ಮಹಾರಾಷ್ಟ್ರ ವಿಧಾನಸಭೆಗೂ ಎಲೆಕ್ಷನ್ ಘೋಷಣೆ ಮಾಡುವ ಸಾಧ್ಯತೆಯಿದೆ. ಆರ್ಟಿಕಲ್ 370 ರದ್ದಾದ ನಂತರ ನಡೆಯುವ ಮೊದಲ ಎಲೆಕ್ಷನ್ ಇದು.
ಸುಪ್ರೀಂಕೋರ್ಟ್ ವಿಧಿಸಿರುವ ಗಡುವಿನ ಪ್ರಕಾರ ಸೆಪ್ಪೆಂಬರ್ 30ರ ಒಳಗೆ ಜಮ್ಮು-ಕಾಶ್ಮೀರಕ್ಕೆ ಎಲೆಕ್ಷನ್ ನಡೆಸಬೇಕು. ಇದರೊಂದಿಗೆ ನವೆಂಬರ್ 3ಕ್ಕೆ ಹರ್ಯಾಣ, ನವೆಂಬರ್ 26ಕ್ಕೆ ಮಹಾರಾಷ್ಟ್ರ ಅವಧಿ ಅಂತ್ಯವಾಗಲಿದೆ. ಹೀಗಾಗಿ ಸುಪ್ರೀಂಕೋರ್ಟ್ ನಿರ್ದೇಶನ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದೆ.
ಇನ್ನು ಹೆಚ್.ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಇ ತುಕಾರಾಂ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರಿಂದ ತೆರವಾಗಿರುವ ಕ್ಷೇತ್ರಕ್ಕೆ ಬೈಎಲೆಕ್ಷನ್ ನಡೆಯಲಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದಿಂದ ಚನ್ನಪ್ಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದ್ದು, ಇಂದೇ ಈ ಕ್ಷೇತ್ರಗಳ ಎಲೆಕ್ಷನ್ಗೆ ಡೇಟ್ ಅನೌನ್ಸ್ ಆಗುತ್ತ ಎಂದು ಕಾದುನೋಡಬೇಕಾಗಿದೆ.
ಇದನ್ನೂ ಓದಿ : ವರಮಹಾಲಕ್ಷ್ಮಿ ಹಬ್ಬದಂದೇ ಮನೆ ಮಾಲೀಕರ ಕೈ ಸೇರಿತು ಕಳುವಾಗಿದ್ದ ಚಿನ್ನಾಭರಣ – ನಾಲ್ವರು ಆರೋಪಿಗಳು ಅರೆಸ್ಟ್..!