Download Our App

Follow us

Home » ರಾಜ್ಯ » ರಾಜ್ಯದ ಜನತೆಗೆ ಕರೆಂಟ್ ಶಾಕ್ – ಇಂದು ಸಂಜೆ KERCಯಿಂದ ವಿದ್ಯುತ್ ದರ ಪರಿಷ್ಕರಣೆ..!

ರಾಜ್ಯದ ಜನತೆಗೆ ಕರೆಂಟ್ ಶಾಕ್ – ಇಂದು ಸಂಜೆ KERCಯಿಂದ ವಿದ್ಯುತ್ ದರ ಪರಿಷ್ಕರಣೆ..!

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಅವಧಿಗೆ ಮುಂಚಿತವಾಗಿಯೇ ವಿದ್ಯುತ್‌ ದರ ಪರಿಷ್ಕರಣೆ ಮಾಡಲು ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗ ಮುಂದಾಗಿದೆ. ಇಂದು ಸಂಜೆಯೇ ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗ (KERC) ವಿದ್ಯುತ್‌ ದರ ಪರಿಷ್ಕರಣೆ ಮಾಡಿ, ಅಧಿಕೃತ ಆದೇಶವನ್ನು ಹೊರಡಿಸೋ ಸಾಧ್ಯತೆಯಿದೆ.

ಪ್ರತಿ ವರ್ಷ ಏರ್ಪಿಲ್‌ನಲ್ಲಿ ವಿದ್ಯುತ್‌ ದರ ಪರಿಷ್ಕರಣೆಯಾಗುತ್ತಿತ್ತು. ಆದ್ರೆ ಈ ಬಾರಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿಸಂಹಿತೆ ಜಾರಿಗೊಂಡರೇ ಪರಿಷ್ಕರಣೆ ಮಾಡೋದಕ್ಕೆ ಸಾಧ್ಯವಾಗೋದಿಲ್ಲ ಎನ್ನುವ ಕಾರಣಕ್ಕೆ ಇಂದು ಸಂಜೆಯೇ ಪರಿಷ್ಕೃತ ದರಪಟ್ಟಿಯನ್ನು ಕೆಇಆರ್​ಸಿ ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ. ಯೂನಿಟ್​​ಗೆ 49 ಪೈಸೆ ಹೆಚ್ಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಕಳೆದ ವರ್ಷ ಆಗಸ್ಟ್‌ 5ರಂದು ಗೃಹಜ್ಯೋತಿ ಯೋಜನೆಗೆ ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಚಾಲನೆ ನೀಡಿತ್ತು. ಈ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ರಾಜ್ಯದ ಜನರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ವಿದ್ಯುತ್‌ ಪೂರೈಕೆಗಾಗಿ ಬೆಸ್ಕಾಂ 235.07 ಮೆಸ್ಕಾಂ 52.73, ಹೆಸ್ಕಾಂ 82.02, ಜೆಸ್ಕಾಂ 53.46, ಚೆಸ್ಕಾಂ 51.26, ಹುಕ್ಕೇರಿ 1.46 ಕೋಟಿ ರೂ. ಸಹಾಯಧನ ಬಿಡುಗಡೆ ಮಾಡಿತ್ತು.

ಗೃಹಜ್ಯೋತಿಗೆ ಇರುವ ಷರತ್ತುಗಳೇನು? ಗೃಹಜ್ಯೋತಿ ಯೋಜನೆಗೆ ವಾರ್ಷಿಕ ಸರಾಸರಿ ಮಾನದಂಡವಿದೆ. 12 ತಿಂಗಳ ಸರಾಸರಿ ಪಡೆದುಕೊಂಡು ಅದರ ಮೇಲೆ 10% ರಷ್ಟು ವಿದ್ಯುತ್‌ ಉಚಿತವಾಗಿ ನೀಡಲಾಗುವುದು. ಯಾರು ಎಷ್ಟು ವಿದ್ಯುತ್ ಬಳಸುತ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ 10% ರಷ್ಟು ವಿದ್ಯುತ್ ಉಚಿತವಾಗಿ ಕೊಡಲಾಗುವುದು. ಉದಾಹರಣೆಗೆ, 70 ಯೂನಿಟ್‌ ಬಳಸುವವರು ಅದಕ್ಕೆ 10% (ಅಂದರೆ ಒಟ್ಟು 80%) ಬಳಕೆ ಮಾಡಬಹುದು. ಕಳೆದ ವರ್ಷ ಸರಾಸರಿ ತಿಂಗಳಿಗೆ 100 ಯೂನಿಟ್ ಬಳಸಿದ್ದವರು ಈಗ 110 ಯೂನಿಟ್ ಬಳಸಿದ್ರೆ ವಿದ್ಯುತ್ ಉಚಿತವಾಗಿ ಸಿಗುತ್ತದೆ. ಒಂದು ವೇಳೆ 110ಕ್ಕಿಂತ ಹೆಚ್ಚು ಯೂನಿಟ್ ಬಳಸಿದ್ರೆ ಹೆಚ್ಚುವರಿ ಯೂನಿಟ್‌ಗೆ ಬಿಲ್ ಕಟ್ಟಬೇಕು. ಹೀಗೆ 200 ಯೂನಿಟ್‌ ವರೆಗೆ ವಿದ್ಯುತ್‌ ಬಳಸುವವರು ಬಿಲ್‌ ಕಟ್ಟುವಂತಿಲ್ಲ. 200 ಯೂನಿಟ್‌ ಉಚಿತ ಅಂತ ಎಲ್ಲರೂ ಬೇಕಾಬಿಟ್ಟಿ ವಿದ್ಯುತ್‌ ಬಳಸುವಂತಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ : ಚಿತ್ರರಂಗದಲ್ಲಿ ಯಾರ‍್ಯಾರು ನಶೆ ಏರಿಸಿಕೊಂಡು ಬೊಗಳಿದ್ದರೊ ಅವರಿಗೆಲ್ಲ ಶ್ರೀಮುರಳಿ ಸೆಡ್ಡು..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here