Download Our App

Follow us

Home » ಸಿನಿಮಾ » ‘ಎಲ್ಲಿಗೆ ಪಯಣ ಯಾವುದೋ ದಾರಿ’ ಸಿನಿಮಾದ ಟೀಸರ್ ರಿಲೀಸ್​​..!

‘ಎಲ್ಲಿಗೆ ಪಯಣ ಯಾವುದೋ ದಾರಿ’ ಸಿನಿಮಾದ ಟೀಸರ್ ರಿಲೀಸ್​​..!

ಕಿರಣ್. ಎಸ್ ಸೂರ್ಯ ನಿರ್ದೇಶನದ, ಅಭಿಮನ್ಯು ಕಾಶಿನಾಥ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ `ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರದ ಟೀಸರ್ ಇದೀಗ ಬಿಡುಗಡೆಗೊಂಡಿದೆ. ಈಗಾಗಲೇ ತಣ್ಣಗೆ ಚಿತ್ರೀಕರಣ ಮುಗಿಸಿಕೊಂಡಿರುವ ಚಿತ್ರತಂಡ ಟೀಸರ್ ರಿಲೀಸ್​​ ಮಾಡಿದ್ದು, ಸೀಮಿತ ದೃಷ್ಯಗಳಲ್ಲಿಯೇ ಕುತೂಹಲದ ಕೆನೆಗಟ್ಟಿಕೊಂಡಿರುವಂತೆ ಭಾಸವಾಗುವ ಈ ಟೀಸರ್ ಪ್ರೇಕ್ಷಕರನ್ನು ಸಲೀಸಾಗಿ ತನ್ನತ್ತ ಸೆಳೆದುಕೊಳ್ಳುವಂತಿದೆ.

 

ಬೇರೆಯದ್ದೇ ತೆರನಾದ ವಿಶಿಷ್ಟ ಪಾತ್ರದ ಮೂಲಕ ಅಭಿಮನ್ಯು ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಸದರಿ ಟೀಸರ್‌ನಲ್ಲಿ ಅವರು ವಿಭಿನ್ನ ಗೆಟಪ್ಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಧಾನವಾಗಿ ಇದೊಂದು ಥ್ರಿಲ್ಲರ್ ಕಥನವನ್ನು ಒಳಗೊಂಡಿರುವ ಚಿತ್ರವೆಂಬ ಸಂದೇಶವೊಂದು, ಅತ್ಯಂತ ಪರಿಣಾಮಕಾರಿಯಾಗಿ ಪ್ರೇಕ್ಷಕರತ್ತ ದಾಟಿಕೊಂಡಿದೆ. ಈ ಟೀಸರ್ ಜೊತೆ ಜೊತೆಗೇ ಒಂದಷ್ಟು ಸೂಕ್ಷ್ಮ ಸಂಗತಿಗಳನ್ನು ಚಿತ್ರತಂಡ ಹಂಚಿಕೊಂಡಿದೆ.

ಈಗಾಗಲೇ ಹನ್ನೆರಡು ವರ್ಷಗಳ ಕಾಲ ಚಿತ್ರರಂಗದ ನಾನಾ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಿರುವವರು ಕಿರಣ್  ಈ ಚಿತ್ರವನ್ನು ನಿರ್ದೇಶಿಸಿ  ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಇದೊಂದು ಲವ್ ಕಂ ಥ್ರಿಲ್ಲರ್ ಜಾನರ್​​ನ ಚಿತ್ರ. ಹಾಗೆಂದ ಮಾತ್ರಕ್ಕೆ ಆ ಪರಿಧಿಗೆ ಸೀಮಿತವಾದ ಕಥೆ ಇಲ್ಲಿದೆ ಅಂದುಕೊಳ್ಳುವಂತಿಲ್ಲ. ಕೊಲೆಯೊಂದರ ಸುತ್ತ ಕಥೆ ಜರುಗುತ್ತದೆ ಅಂದುಕೊಳ್ಳಲೂ ಸಾಧ್ಯವಿಲ್ಲ. ಇದುವರೆಗೆ ನೋಡಿದ್ದು ನಿಜವೋ ಸುಳ್ಳೋ ಎಂಬಂತೆ ಬೆರಗಿಗೆ ದೂಡುವ ರೀತಿಯಲ್ಲಿ ಈ ಸಿನಿಮಾವನ್ನು ರೂಪಿಸಲಾಗಿದೆಯಂತೆ. ವಿಶೇಷವೆಂದರೆ, ಕಿಚ್ಚ ಸುದೀಪ್ ಈ ಚಿತ್ರದ ಹಾಡೊಂದನ್ನು ಹಾಡಿದ್ದಾರೆ. ವಾಸುಕಿ ವೈಭವ್ ಹಾಗೂ ಸಪ್ತಸಾಗರದಾಚೆ ಎಲ್ಲೋ ಖ್ಯಾತಿಯ ಶ್ರೀಲಕ್ಷ್ಮಿ ಒಂದೊಂದು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಎರಡು ಹಾಡುಗಳಿಗೆ ಖುದ್ದು ನಿರ್ದೇಶಕ ಕಿರಣ್ ಎಸ್ ಸೂರ್ಯ ಸಾಹಿತ್ಯ ಬರೆದಿದ್ದಾರೆ.

ಈ ಚಿತ್ರವನ್ನು ಸುದರ್ಶನ ಆರ್ಟ್ಸ್ ಬ್ಯಾನರ್​​ನಡಿಯಲ್ಲಿ ಜತಿನ್ ಪಟೇಲ್ ನಿರ್ಮಾಣ ಮಾಡಿದ್ದಾರೆ. ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯೊಂದಿಗೆ ಕಿರಣ್ ಎಸ್ ಸೂರ್ಯ ನಿರ್ದೇಶನ ಮಾಡಿದ್ದಾರೆ. ಅಭಿಮನ್ಯು ಕಾಶಿನಾಥ್ ಅವರಿಗೆ ಸ್ಫೂರ್ತಿ ಉಡಿಮನೆ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ವಿಜಯಶ್ರೀ ಕಲಬುರ್ಗಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ.

ಇನ್ನು ಬಲ ರಾಜವಾಡಿ, ಶೋಭನ್, ಅಯಾಂಕ್, ರಿನಿ ಬೋಪಣ್ಣ, ಪ್ರದೀಪ್, ರವಿತೇಜ, ಕಿಶೋರ್, ಅಶ್ವಿನಿ ರಾವ್, ಪ್ರಿಯಾ ಮುಂತಾದವರ ತಾರಾಗಣವಿದೆ. ಪ್ರಣವ್ ರಾವ್ ಸಂಗೀತ ನಿರ್ದೇಶನ, ಸತ್ಯ ರಾಮ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಮೋದ್ ಮರವಂತೆ ಸಾಹಿತ್ಯವಿದೆ. ಪೋಸ್ಟ್ ಪ್ರೊಡಕ್ಷನ್ ಹಂತ ದಾಟಿಕೊಂಡಿರುವ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ.

ಇದನ್ನೂ ಓದಿ : ರಾಜ್ಯಾದ್ಯಂತ ‘ವಿಕಾಸ ಪರ್ವ’ ಚಿತ್ರತಂಡಕ್ಕೆ ಅದ್ಭುತ ಪ್ರತಿಕ್ರಿಯೆ – ಸೆ.13ಕ್ಕೆ ಫ್ಯಾಮಿಲಿ ಥ್ರಿಲ್ಲರ್ ಸಿನಿಮಾ ರಿಲೀಸ್​​..!

Leave a Comment

DG Ad

RELATED LATEST NEWS

Top Headlines

BBK11: ‘ನಿಮ್ಮ ರೀತಿಯ ಫೂಟೇಜ್ ನನಗೆ ಬೇಡ’ – ಮೋಕ್ಷಿತಾ ಖಡಕ್​ ಮಾತಿಗೆ ಜಗದೀಶ್ ಪುಲ್​ ಸೈಲೆಂಟ್..!

ಬಿಗ್‌ ಬಾಸ್‌ ಮನೆ ಈಗ ರಣರಂಗವಾಗಿದ್ದು, ಎರಡನೇ ವಾರಕ್ಕೆ ಕಾಲಿಟ್ಟಿದೆ. 16 ಸ್ಪರ್ಧಿಗಳ ಮಧ್ಯೆ ಒಂಟಿ ಮನೆಯಲ್ಲಿ ಆಟ ಮುಂದುವರಿದಿದೆ. ಮೊದಲ ವಾರ ಯಮುನಾ ಶ್ರೀನಿಧಿ ಎಲಿಮಿನೇಟ್

Live Cricket

Add Your Heading Text Here