ಜ. 22ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾವನ್ನು BCCI ಪ್ರಕಟಿಸಿದೆ. ಅಚ್ಚರಿಯ ಆಯ್ಕೆ ಎಂಬಂತೆ ವರ್ಷಗಳಿಂದ ತಂಡದಿಂದ ದೂರ ಉಳಿದಿದ್ದ ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಟಿ20 ತಂಡದಲ್ಲಿ ಸ್ಥಾನ ನೀಡಲಾಗಿದೆ.
ಬಿಸಿಸಿಐ ಆಯ್ಕೆ ಸಮಿತಿಯು ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ ಆಟದಿಂದ ಹೊರಗುಳಿದಿದ್ದ ಶಮಿ ಈ ಟಿ20 ಸರಣಿಯಿಂದ ಮತ್ತೆ ತಂಡಕ್ಕೆ ಮರಳುತ್ತಿದ್ದಾರೆ. ಶಮಿಯನ್ನು ಹೊರತುಪಡಿಸಿ ಉಳಿದಂತೆ ಆಟಗಾರರು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಆಡಿದವರೇ ಆಗಿದ್ದಾರೆ. ಈ ಮೊದಲೇ ಹೇಳಿದಂತೆ ಟಿ20 ಸರಣಿಗೆ ಮಾತ್ರ ತಂಡವನ್ನು ಆಯ್ಕೆ ಮಾಡಲಾಗಿದ್ದು, ಏಕದಿನ ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿಗೆ ತಂಡವನ್ನು ತಡವಾಗಿ ಪ್ರಕಟಿಸುವ ಸಾಧ್ಯತೆಯಿದೆ.
ರೋಹಿತ್ ಶರ್ಮಾ ಬಳಿಕ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಸೂರ್ಯಕುಮಾರ್ ಯಾದವ್ ಅವರು ಈ ಸರಣಿಗೂ ನಾಯಕರಾಗಿದ್ದಾರೆ.
ಅಕ್ಸರ್ ಪಟೇಲ್ ಉಪನಾಯಕ : ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್‌ರಂತಹ ಅನುಭವಿ ಆಟಗಾರರು ತಂಡದಲ್ಲಿದ್ದರೂ ಕೂಡ ಟೀಂ ಇಂಡಿಯಾ ಆಯ್ಕೆ ಸಮಿತಿ ಅಕ್ಸರ್ ಪಟೇಲ್ ಅವರನ್ನು ಉಪನಾಯಕನನ್ನಾಗಿ ನೇಮಿಸಿರುವುದು ಅಚ್ಚರಿಗೆ ಕಾರಣವಾಗಿದೆ. ತಂಡದಲ್ಲಿ ಇಬ್ಬರು ವಿಕೆಟ್ ಕೀಪರ್‌ಗಳಿಗೂ ಅವಕಾಶ ಕೊಡಲಾಗಿದೆ. ಇಶಾನ್ ಕಿಶನ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ.
ಟಿ20 ಸರಣಿಗೆ ಭಾರತ ತಂಡ ಹೀಗಿದೆ : ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ , ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).
ಇದನ್ನೂ ಓದಿ : ಮಹಿಳಾ ಇಂಜಿನಿಯರ್ಗೆ ಬೆದರಿಕೆ ಹಾಕಿದ ಗುತ್ತಿಗೆದಾರನ ವಿರುದ್ಧ FIR..!