Download Our App

Follow us

Home » ಅಪರಾಧ » ಗೋವಾದಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ಮೌಲ್ಯದ ಮದ್ಯ ವಶಕ್ಕೆ ಪಡೆದ ಅಬಕಾರಿ ಇಲಾಖೆ..!

ಗೋವಾದಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ಮೌಲ್ಯದ ಮದ್ಯ ವಶಕ್ಕೆ ಪಡೆದ ಅಬಕಾರಿ ಇಲಾಖೆ..!

ಬೆಂಗಳೂರು : ಗೋವಾದಿಂದ ಅಕ್ರಮವಾಗಿ ಬೆಂಗಳೂರಿಗೆ ಮದ್ಯ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಅಬಕಾರಿ ಪೊಲೀಸರು 3240 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಮೂಲದ ಆರೋಪಿಗಳಾದ ಪರಮೇಶ್ವರ್ ದೇವಪ್ಪ ನಾಯಕ ಹಾಗೂ ವಾಹನ ಚಾಲಕ ಅಮೀತ ಪಡತಾರೆ ಎಂಬುವವರನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ.

ಅಬಕಾರಿ ಜಂಟಿ ಆಯುಕ್ತ ಎ.ಎಲ್.ನಾಗೇಶ್ ಅವರ ಮಾರ್ಗದರ್ಶನದಲ್ಲಿ ಉಪ ಆಯುಕ್ತ ವೀರಣ್ಣ ಬಾಗೇವಾಡಿ ನೇತೃತ್ವದಲ್ಲಿ ವಲಯ-30ರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಕೈಗೊಂಡ ಮಹದೇವಪುರ ವಲಯ ನಿರೀಕ್ಷಕರಾದ ಅಬೂಬಕರ್ ಮುಜಾವರ್ ಅವರ ನೇತೃತ್ವದ ತಂಡ ಹಳೆ ಮದ್ರಾಸ್ ರಸ್ತೆ, ದೂರವಾಣಿ ನಗರದ ಬಿಎಂಟಿಸಿ ಡಿಪೋ-24ರ ಬಳಿ ವಾಹನವನ್ನು ತಡೆದು ಪರಿಶೀಲಿಸಿದಾಗ ಅಕ್ರಮ ಮದ್ಯ ಸಾಗಾಟ ಕಂಡುಬಂದಿದೆ.

ಮೇಲ್ನೋಟಕ್ಕೆ ಇದು ನಕಲಿ ಮದ್ಯವೆಂದು ಕಾಣುತ್ತಿದ್ದು, ತನಿಖೆ ಕೈಗೊಳ್ಳಲಾಗಿದೆ. ವಶಪಡಿಸಿಕೊಂಡ ಮದ್ಯದ ಮಾಲು ಸುಮಾರು 50 ಲಕ್ಷ ರೂ. ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡು ಬಂಧಿತ ಆರೋಪಿಗಳನ್ನು ವಿಚಾರಣೆಗೊಳಪಡಿಸಲಾಗಿದೆ. ಮದ್ಯವನ್ನು ಹೊಸಕೋಟೆಗೆ ಸಾಗಿಸಲಾಗ್ತಿತ್ತು ಎನ್ನಲಾಗಿದೆ.

ಇದನ್ನೂ ಓದಿ : ತಹಶೀಲ್ದಾರ್ ನಿರ್ಲಕ್ಷ್ಯದಿಂದ ತಪ್ಪು ನಡೆದಿದೆ.. ಹಿರೇಮಗಳೂರು ಕಣ್ಣನ್​​ಗೆ ನೀಡಿರುವ ನೋಟಿಸ್ ಹಿಂಪಡೆಯಲು ಸೂಚಿಸಿದ್ದೇನೆ : ಸಚಿವ ರಾಮಲಿಂಗಾರೆಡ್ಡಿ..

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here