Download Our App

Follow us

Home » ರಾಜ್ಯ » ವಾಹನ ಸವಾರರಿಗೆ ಗುಡ್ ನ್ಯೂಸ್ : HSRP ನಂಬರ್ ಪ್ಲೇಟ್ ಅಳವಡಿಸಲು ಮೇ.31ರವರೆಗೆ ಅವಧಿ ವಿಸ್ತರಣೆ..!

ವಾಹನ ಸವಾರರಿಗೆ ಗುಡ್ ನ್ಯೂಸ್ : HSRP ನಂಬರ್ ಪ್ಲೇಟ್ ಅಳವಡಿಸಲು ಮೇ.31ರವರೆಗೆ ಅವಧಿ ವಿಸ್ತರಣೆ..!

ಬೆಂಗಳೂರು : ವಾಹನ ಸವಾರರಿಗೆ ರಾಜ್ಯ ಸರ್ಕಾರ ಗುಡ್​ನ್ಯೂಸ್ ನೀಡಿದ್ದು, HSRP ನಂಬರ್​​ ಪ್ಲೇಟ್ ಅಳವಡಿಕೆಗೆ ಮೂರು ತಿಂಗಳ ಹೆಚ್ಚುವರಿ ಕಾಲಾವಕಾಶವನ್ನು ಘೋಷಣೆ ಮಾಡಿದೆ.

ಮೇ.31 ರವರೆಗೆ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ವಾಹನಗಳ ಸುರಕ್ಷತೆಗಾಗಿದ್ದು, ಈ ಪ್ಲೇಟ್ ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ.

2019ರ ಏಪ್ರಿಲ್ 1ಕ್ಕೂ ಮೊದಲು ನೋಂದಣಿ ಆಗಿರುವ ವಾಹನಗಳು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಿದೆ. ರಾಜ್ಯ ಸರ್ಕಾರ ಫೆಬ್ರವರಿ 17ರ ಗಡುವು ನೀಡಿತ್ತು. ಆದರೆ ಕೊನೇ ಕ್ಷಣದಲ್ಲಿ ಸರ್ಕಾರ 3 ತಿಂಗಳು ಡೆಡ್‌ಲೈನ್​​ನ್ನು ಮುಂದೂಡಿದೆ.

ಹಲವು ಬಾರಿ ಗಡುವು ವಿಸ್ತರಿಸಿದರೂ ಈವರೆಗೆ ಕೇವಲ 12 ಲಕ್ಷ ವಾಹನಕ್ಕೆ ಮಾತ್ರ ಎಚ್‌ಎಸ್‌ಆರ್‌ಪಿ ಅಳವಡಿಕೆ ಮಾಡಲಾಗಿತ್ತು. ಬಾಕಿ 1.88 ಕೋಟಿ ವಾಹನಕ್ಕೆ ಎಚ್‌ಎಸ್‌ಆರ್‌ಪಿ ಅಳವಡಿಸಲು ಹೊಸ ಸವಾಲು ಎದುರಾಗಿತ್ತು. ಈ ಹಿನ್ನೆಲೆ ಸಾರಿಗೆ ಇಲಾಖೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸಲು ಜನ ಮುಗಿಬಿದ್ದ ಸಮಯಕ್ಕೇ, ವೆಬ್‌ಸೈಟ್ ಕೂಡ ಕ್ರಾಷ್ ಆಗಿತ್ತು. ಇದೇ ಕಾರಣಕ್ಕೆ ಸರ್ಕಾರ ಈಗ ಮತ್ತೆ 3 ತಿಂಗಳು ಡೆಡ್‌ಲೈನ್​​ನ್ನು ವಿಸ್ತರಣೆ ಮಾಡಿದೆ.

ಇದನ್ನೂ ಓದಿ ; ಶಿವಮೊಗ್ಗ : ಕಾರ್​ ಶೋರೂಮ್​ನಲ್ಲಿ ಭಾರೀ ಅಗ್ನಿ ಅವಘಡ – ಬೆಂಕಿಯ ಕೆನ್ನಾಲಿಗೆಗೆ ಶೋ ರೂಮ್​ನಲ್ಲಿದ್ದ ಕಾರುಗಳು ಭಸ್ಮ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here