ಕೇರಳ : ಮಲಯಾಳಂನ ಖ್ಯಾತ ನಟ ಬಾಲಾ ಅವರನ್ನು ಕೇರಳ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಬಂಧಿಸಿದ್ದಾರೆ. ಮಾಜಿ ಪತ್ನಿ ನೀಡಿದ ದೂರಿನ ಮೇರೆಗೆ ಕಡವಂತರಾ ಪೊಲೀಸರು ಬಾಲಾ ಮತ್ತು ಮ್ಯಾನೇಜರ್ ರಾಜೇಶ್ ಅವರನ್ನು ಕೊಚ್ಚಿಯಲ್ಲಿರುವ ಮನೆಯಿಂದ ಬಂಧಿಸಿದ್ದಾರೆ.
ನಟನ ಮ್ಯಾನೇಜರ್ ರಾಜೇಶ್ ಮತ್ತು ಮತ್ತೊಬ್ಬ ಆರೋಪಿ ಅನಂತಕೃಷ್ಣನ್ ಅವರನ್ನೂ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳ ಮೂಲಕ ನಿಂದನೆ ಮತ್ತು ಕಿರುಕುಳ ನೀಡಿದ ಆರೋಪ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಮಾಜಿ ಪತ್ನಿಯ ದೂರಿನಲ್ಲೇನಿದೆ? ಇತ್ತೀಚೆಗೆ, ನಟ ಬಾಲಾ ತನ್ನ ಮಾಜಿ ಪತ್ನಿ ಮತ್ತು ಮಗಳೊಂದಿಗಿನ ಸಂಬಂಧದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗಳನ್ನು ಮಾಡಿದ್ದರು. ಇದಕ್ಕೆ ಪ್ರತಿಯಾಗಿ ತಾಯಿ, ಮಗಳು ದೂರು ದಾಖಲಿಸಿದ್ದರು. ದೂರಿನಲ್ಲಿ ಬಾಲಾ ಅವರು ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳ ಮೂಲಕ ಅವಮಾನಿಸಿದ್ದಾರೆ. ಮತ್ತು ಅವರ ವೀಡಿಯೊಗಳು ತಮ್ಮ ಮಗಳಿಗೆ ಭಾವನಾತ್ಮಕವಾಗಿ ಹಾನಿ ಮಾಡಿದೆ ಎಂದು ಉಲ್ಲೇಖಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ದೂರಿನಲ್ಲಿ ಸತ್ಯಾಂಶ ಕಂಡು ಬಂದಿದ್ದು, ಇದರ ಆಧಾರದ ಮೇಲೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮಹಿಳೆಯನ್ನು ಅವಮಾನಿಸಿದ್ದಕ್ಕಾಗಿ ಐಪಿಸಿಯ 354 ಸೆಕ್ಷನ್ ಹಾಗೂ ಇನ್ನಿತರ ಕೆಲವು ಆರೋಪ ಹಿನ್ನೆಲೆಯಲ್ಲಿ ನಟನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಬಿಗ್ಬಾಸ್ಗೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್.. ಈ ದಿಢೀರ್ ನಿರ್ಧಾರಕ್ಕೆ ಕಾರಣವೇನು?