ಬಿಹಾರ : ನಕಲಿ ವೈದ್ಯನೊಬ್ಬ ಯೂಟ್ಯೂಬ್ ನೋಡಿ ಆಪರೇಷನ್ ಮಾಡಿದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಾಲಕನಿಗೆ ಪಿತ್ತಕೋಶದಲ್ಲಿ ಕಲ್ಲಾಗಿ ತುಂಬಾ ದಿನಗಳಿಂದ ನೋವು ಅನುಭವಿಸುತ್ತಿದ್ದ. ತಾನು ಶಸ್ತ್ರಚಿಕಿತ್ಸೆ ನಡೆಸುವುದಾಗಿ ನಕಲಿ ವೈದ್ಯನೊಬ್ಬ ಭರವಸೆ ಕೊಟ್ಟು, ಯೂಟ್ಯೂಬ್ ನೋಡಿ ಆಪರೇಷನ್ ಮಾಡಲು ಹೋಗಿ ಬಾಲಕನ ಜೀವವನ್ನೇ ತೆಗೆದಿದ್ದಾನೆ.
ಬಿಹಾರದ ಸರನ್ ಎಂಬಲ್ಲಿ ನಕಲಿ ವೈದ್ಯ ಯೂಟ್ಯೂಬ್ ವೀಡಿಯೋವನ್ನು ಅನುಸರಿಸಿ ಬಾಲಕನ ಪಿತ್ತಕೋಶದಲ್ಲಿರುವ ಕಲ್ಲನ್ನು ತೆಗೆಯುವುದಕ್ಕೆ ಆಪರೇಷನ್ ಮಾಡಿದ್ದಾರೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಬಾಲಕನನ್ನು ಪಾಟ್ನಾದ ಬೇರೆ ಆಸ್ಪತ್ರೆಗೆ ಕರೆದೊಯ್ಯುವುದಕ್ಕೆ ಅಂಬುಲೆನ್ಸ್ ವ್ಯವಸ್ಥೆಯನ್ನು ಮಾಡಿದ್ದಾರೆ. ಮಾರ್ಗ ಮಧ್ಯೆ ಬಾಲಕ ಮೃತಪಟ್ಟಿದ್ದು, ದೇಹವನ್ನು ಆಸ್ಪತ್ರೆಯಲ್ಲಿ ಬಿಟ್ಟು ವೈದ್ಯರು ಹಾಗೂ ಜೊತೆಗಿದ್ದವರು ಪರಾರಿಯಾಗಿದ್ದಾರೆ.
ಬಾಲಕನು ಪದೇ ಪದೇ ವಾಂತಿ ಮಾಡುತ್ತಿದ್ದ. ಆದ್ದರಿಂದ ಆತನನ್ನು ಸರನ್ ನಗರದಲ್ಲಿರುವ ಗಣಪತಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಡ್ಮಿಟ್ ಮಾಡಿಸಿದಾಗ ವಾಂತಿ ನಿಂತಿತ್ತು. ಆದರೆ ವೈದ್ಯ ಅಜಿತ್ ಕುಮಾರ್ ಪುರಿ ಈತನಿಗೆ ಆಪರೇಷನ್ ಅಗತ್ಯ ಇದೆ. ಆಪರೇಷನ್ ಮಾಡಬೇಕು ಎಂದರು. ಅವರು ಯೂಟ್ಯೂಬ್ ವೀಡಿಯೋವನ್ನು ನೋಡಿ ಆಪರೇಷನ್ ಮಾಡಿ ಬಾಲಕನ ಜೀವವನ್ನೇ ತೆಗೆದಿದ್ದಾನೆ.
ಇದನ್ನೂ ಓದಿ : ಬೆಳಗಾವಿ : ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದ ಸರ್ಕಾರಿ ಬಸ್ – ಬಾಲಕ ಸ್ಥಳದಲ್ಲೇ ಸಾ*ವು..!